ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿಗಳ ಭೇಟಿ

ಗದಗ 18: ಗದಗ ಜಿಲ್ಲಾಡಳಿತ ಭವನದ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದರು. ಸಾರ್ವಜನಿಕ ಶಿಕ್ಷಣ, ಗಣಿ ಮತ್ತು ಭೂ ವಿಜ್ಞಾನ, ಸಮಾಜ ಕಲ್ಯಾಣ, ಅಬಕಾರಿ, ಕನ್ನಡ ಮತ್ತು ಸಂಸ್ಕೃತಿ, ಆರೋಗ್ಯ, ಹಿಂದುಳಿದ ವರ್ಗ, ಸಣ್ಣ ನೀರಾವರಿ, ಗ್ರಂಧಾಲಯ ಇಲಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಂಬಂಧಿತ ಇಲಾಖೆಗಳು ಸಕಾಲ ಯೋಜನೆ ಕುರಿತು ಸಾರ್ವಜನಿಕ ಮಾಹಿತಿ ಫಲಕ ಅಳವಡಿಕೆ ಕುರಿತು ಪರಿಶೀಲಿಸಿ ಸಲಹೆ ಸೂಚನೆ ನೀಡಿ ಸಕಾಲದಡಿ ಅಜರ್ಿಗಳು ಸಕಾಲದಲ್ಲಿ ವಿಲೇವಾರಿಯಾಗುವಂತೆ ಸೂಚನೆ ನೀಡಿದರು.