ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸಲು ಶೆಟ್ಟರ್ ಸೂಚನೆ

ಧಾರವಾಡ 21: ಇತ್ತೀಚೆಗೆ ಸುರಿದ ಭಾರಿ ಮಳೆಯಿಚಿದ ಕುಟುಂಬ ಹಾಗೂ ಮನೆಯಲ್ಲಿನ ಸಾಮಗ್ರಿಗಳನ್ನು ಕಳೆದುಕೊಂಡವರಿಗೆ 10 ಸಾವಿರ ರೂ.ಗಳನ್ನು ತಕ್ಷಣವೇ ವಿತರಿಸುವಂತೆ ಅಧಿಕಾರಿಗಳಿಗೆ  ತಿಳಿಸಲಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

 ಅಳ್ನಾವರ ಸಮೀಪದ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕೆರೆ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿ ವೃಷ್ಟಿಯಿಂದ ಮನೆ ಅರ್ಧ ಭಾಗ ಕುಸಿತಗೊಂಡಿದ್ದರೆ 1 ಲಕ್ಷ ರೂ ಹಾಗೂ ಪೂರ್ಣ ಪ್ರಮಾನದಲ್ಲಿ  ಮನೆ ಹಾನಿಯಾಗಿದ್ದರೆ 5 ಲಕ್ಷ ರೂ ಪರಿಹಾರ ನೀಡಲು ರಾಜ್ಯ ಸಕರ್ಾರ ನಿರ್ಣಯ ಕೈಗೊಂಡಿದೆ. ಈಗಾಗಲೇ ಕೇಂದ್ರ ಸಕರ್ಾರ  1 ಸಾವಿರ ಕೋಟಿ ಹಣವನ್ನು ಪರಿಹಾರ ಕಾರ್ಯಗಳಿಗೆ ಬಿಡುಗಡೆ  ಮಾಡಿದೆ. ಇನ್ನೂ ಹೆಚ್ಚಿನ ಹಣ ನೀಡಲಿದೆ ಎಂದು ತಿಳಿಸಿದರು. 

25-30 ವರ್ಷಗಳ ನಂತರ ನೆರೆ ಹಾವಳಿ ಜಿಲ್ಲೆಯಲ್ಲಿ ಉಂಟಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಪರಿಹಾರ ಒದಗಿಸುವ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕ್ಯಾಬಿನೆಟ್ ಸಭೆ ನಡೆಸಿ ಎಲ್ಲ ಸಚಿವರಿಗೆ ಎರಡು ದಿನಗಳ ಕಾಲ ನೆರೆ ಪ್ರದೇಶಗಳಗೆ ಭೇಟಿ ನೀಡಿ ವಾಸ್ತವತೆಯನ್ನು ಪರಿಶೀಲಿಸಿ ಶೀಘ್ರವೇ ಪರಿಹಾರ ಒದಗಿಸುವ ಕಾರ್ಯ ಮಾಡುವಂತೆ ಸೂಚಿಸಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಹುಲಿಕೇರಿ ಗ್ರಾಮದ ಇಂದಿರಮ್ಮನ ಕೆರೆಯು  ಸುಮಾರು 700 ಎಕರೆ ವಿಸ್ತೀರ್ಣ ಹೊಂದಿದ್ದು, ಈ ಭಾಗದಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿ ನೀರು ನಿಲ್ಲುತ್ತದೆ. ಇದರಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಒಂದು ವೇಳೆ ಕೆರೆ ಒಡೆದರೆ ಇಡೀ ಅಳ್ನಾವರ ಪಟ್ಟಣ ಮುಳುಗಡೆಯಾಗುತ್ತದೆ. ಅಲ್ಲದೆ ಹಳಿಯಾಳ ಪ್ರದೇಶಕ್ಕೂ ಹಾನಿಯಾಗುತ್ತದೆ. ಹೀಗಾಗಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಯೋಜನೆ ರೂಪಿಸಬೇಕು ಎಂದು ಇಂಜಿನೀಯರುಗಳಿಗೆ ಸೂಚಿಸಿದ್ದೇನೆ ಎಂದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಘ್ರವೇ ರಸ್ತೆಯನ್ನು ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು. ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸಕರ್ಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವ ಮುನ್ನವೇ ಕೇಂದ್ರ ಸಕರ್ಾರ ಮುಂಗಡವಾಗಿ ಹಣ ನೀಡಿದೆ. ವರದಿ ನಂತರ ಹೆಚ್ಚಿನ ನೆರವು ದೊರೆಯಲಿದೆ ಎಂದರು.