ಶೆಟ್ಟಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ
Shetty wins state-level achievement award
ವಿಜಯಪುರ 17: ವಿಜಯಪುರ ಜಿಲ್ಲಾ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಇತ್ತೀಚೆಗೆ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನಾಡಗೀತೆ ನೂರರ ಸಂಭ್ರಮ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ ಲಭಿಸಿದೆ.
ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಳೆದ ಮೂರು ದಶಕಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಸಮಾಜಮುಖಿ ಬದುಕಿಗೆ ಮಾದರಿಯಾಗಿರುವ ಅವರ ಅನುಪಮ ಮತ್ತು ಅಮೋಘ ಸೇವೆಯನ್ನು ಪರಿಗಣಿಸಿ ಈ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರಶಸ್ತಿ ಪುರಷ್ಕೃತ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ಕುಲಸಚಿವ ಶಂಕರಗೌಡ ಸೋಮನಾಳ, ಕುಲಸಚಿವ ಮೌಲ್ಯಮಾಪನ ಪ್ರೊ.ಬಿ.ಎಲ್.ಲಕ್ಕಣ್ಣವರ ಮತ್ತು ವಿಶ್ವವಿದ್ಯಾನಿಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 