ಶಿರಹಟ್ಟಿ : 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದ ಪವಿತ್ರ ಕಾರ್ಯದಲ್ಲಿ ತೊಡಗಿ: ಚವ್ಹಾಣ

ಲೋಕದರ್ಶನ ವರದಿ

ಶಿರಹಟ್ಟಿ 17: ಜಿಲ್ಲೆಯ ಎಲ್ಲ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಜಾಪ್ರಭುತ್ವದ ಯಶಸ್ಸನ್ನು ಸಾಧಿಸಲು ಕೈ ಜೋಡಿಸಬೇಕು. ನಮ್ಮ ನಾಯಕರ ಆಯ್ಕೆ-ನಮ್ಮ ಹಕ್ಕು, ಸುಭದ್ರ ಮತ್ತು ಸದೃಢ ದೇಶ ನಿಮರ್ಾಣದಲ್ಲಿ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತಿವೆ. ಆದ್ದರಿಂದ 18ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದ ಪವಿತ್ರ ಕಾರ್ಯದಲ್ಲಿ ತೊಡಗಿಸಿ ಕೊಳ್ಳಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚೌಹಾಣ ಹೇಳಿದರು. 

ಅವರು ಶಿರಹಟ್ಟಿಯ ಜ.ಫಕೀರೇಶ್ವರ ಕಲ್ಯಾಣ ಮಂಟಪದಲ್ಲಿ ನೇರದಿದ್ದ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರಿಗೆ ಮತದಾನ ಸಿದ್ಧತೆ ಕುರಿತು ಜಿಲ್ಲಾ ಸ್ವೀಪ್ ಸಮಿತಿ ಆಯೋಜಿಸಿದ್ದಂತಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಈಗಾಗಲೇ ಜಿಲ್ಲೆಯ ಪ್ರತಿಯೊಂದು ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಕಳೆದ 2 ತಿಂಗಳುಗಳಿಂದ ಹಂತ ಹಂತವಾಗಿ ಮಾಡುತ್ತಾ ಬಂದಿದೆ. ಮತಗಟ್ಟೆಗೆ ತೆರಳುವ ಮೊದಲು ತಮ್ಮ ಹೆಸರು ಮತದಾರರ ಯಾದಿಯಲ್ಲಿ ಸೇರ್ಪಡೆಯಾಗಿದೆಯೇ ಎಂಬ ಬಗ್ಗೆ ಎಸ್ಎಂಎಸ್ ಅಥವಾ ಆನ್ಲೈನ್ ಮೂಲಕ ಖಚಿತಪಡಿಸಿಕೊಳ್ಳಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರ ಮತದಾನದ ಪ್ರಮಾಣ ಕಡಿಮೆಯಾಗಿದೆ. ಇದನ್ನು ಹೋಗಲಾಡಿಸುವುದಕ್ಕೆ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. 

ಜಿಲ್ಲೆಯಲ್ಲಿ 13676 ವಿಶೇಷಚೇತನರನ್ನು ಗುರುತಿಸಲಾಗಿದ್ದು, ಇವರನ್ನು ಮತದಾನದ ದಿನದಂದು ಮನೆಯಿಂದ ಕರೆತಂದು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತ್ತೆ ಅವರನ್ನ ಸುರಕ್ಷಿತವಾಗಿ ಮನೆಗೆ ಕಳುಹಿಸುವ ವ್ಯವಸ್ಥೆಯನ್ನು ಸಹ ಜಿಲ್ಲಾಢಳಿತ ಮಾಡಿದೆ. ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮತದಾನ ಮಾಡಲಿಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ನೇರವಾಗಿ ಮತಗಟ್ಟೆ ಕೇಂದ್ರಕ್ಕೆ ತೆರಳಿ ಮತದಾನ ಮಾಡಬಹುದು. ಇದಕ್ಕಾಗಿ ಆಯೋಗ ಬಿಡುಗಡೆಗೊಳಿಸಿರುವ ಚುನಾವಣಾ ಆಪ್ನ್ನು ಸಹ   ಡೌನ್ಲೋಡ ಮಾಡಿಕೊಂಡು ವ್ಹೀಲ್ಚೇರ್ ಮತ್ತು ಸಾರಿಗೆ ವ್ಯವಸ್ಥೆಗೆ ಆನ್ಲೈನ್ ಮೂಲಕವು ಸಹ ಬುಕ್ಕಿಂಗ್ ಮಾಡಬಹುದಾಗಿದೆ ಎಂದರು. 

ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟಿ.ದಿನೇಶ ಮಾತನಾಡಿದರು. ತಾಪಂ ಇಓ ಅನ್ನದಾನಸ್ವಾಮಿ, ಸಿಡಿಪಿಓ ಎಸ್.ಎ.ಗೋಡಕಿಂಡಿ ಉಪಸ್ಥಿತರಿದ್ದರು.