ಶಿವರಾತ್ರಿ ಅಂಗವಾಗಿ ಶಿವಯೋಗ ಕಾರ್ಯಕ್ರಮ
Shiva Yoga program as part of Shivaratri
ಹುಬ್ಬಳ್ಳಿ 13: ಬಸವ ಕೇಂದ್ರದ ವತಿಯಿಂದ ಶಿವರಾತ್ರಿ ಅಂಗವಾಗಿ ಶಿವಯೋಗ (ಸಾಮೂಹಿಕ ಇಷ್ಠಲಿಂಗ ಪೂಜೆ ಹಾಗೂ ಯೋಗ) ಕಾರ್ಯಕ್ರಮ ಹಾಗೂ ಶರಣ ಡೋಹರ ಕಕ್ಕಯ್ಯನವರ ಜಯಂತಿ ಕಾರ್ಯಕ್ರಮವನ್ನು ರವಿವಾರ ದಿನಾಂಕ 15-02-2026 ರಂದು ಮುಂಜಾನೆ 9 ಗಂಟೆಗೆ ಗೋಕುಲ ರಸ್ತೆ, ಮುರಾರ್ಜಿನಗರ 2ನೇ ಹಂತ, ಬಸವ ಕೇಂದ್ರದ (ವಿ.ಎಂ.ಕೊಟಗಿ ಬಸವ ಸಂಸ್ಕೃತಿ ಶಾಲೆಯ) ಸಭಾಭವನದಲ್ಲಿ ಆಯೋಜಿಸಲಾಗಿದೆ. ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅವರು ಶಿವಯೋಗ ಚಿಂತನ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ. ಕೊಪ್ಪಳದ ಶರಣ ತತ್ವ ಚಿಂತಕರಾದ ಡಾ ಸಂಗಮೇಶ ಕಲಹಾಳ್ ಅವರು ಅತಿಥಿಗಳಾಗಿ ಭಾಗವಹಿಸುವರು. ಆಸಕ್ತ ಬಸವಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ತಿಳಿಸಿದ್ದಾರೆ. ಇಷ್ಟಲಿಂಗ ದೀಕ್ಷೆ ನೀಡಲಾಗುವುದು. ಲಿಂಗಗಳು, ಲಿಂಗ ಚೀಲಗಳು, ವಿಭೂತಿ, ರುದ್ರಾಕ್ಷಿ, ಪುಸ್ತಕಗಳು ಲಭ್ಯವಿರುತ್ತವೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 