ಶಿವಗಿರಿ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ
Shivagiri Society distributes free notebooks to students
ಲೋಕದರ್ಶನ ವರದಿ
ಬೆಳಗಾವಿ 08: ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಶಿವಗಿರಿ ಕೋ ಆಪ್ ಕ್ರೆಡಿಟ್ ಸೊಸೈಟಿ ವತಿಯಿಂದ ಬಿಲ್ಲವರ ಅಸೋಸಿಯೇಶನ್ ಸಹಯೋಗದೊಂದಿಗೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು.
ಈ ವೇಳೆ ದಂತ ವೈದ್ಯರಾದ ಡಾ. ತೇಜಸ್ವಿನಿ ಹೊಂಗಲ್ ಅವರು ಮಾತನಾಡಿ, ಸಾಮಾಜಿಕ ಜವಾಬ್ದಾರಿ ನಿಧಿಯ ಅಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಘವು ಈ ಜನಪರ ಕಾರ್ಯಕ್ರಮವನ್ನು ಆಯೋಜಿಸಿದೆ ಸಂತೋಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ಹಾದಿ ಸುಲಭವಾಗಲಿ ಎಂಬ ಉದ್ದೇಶದಿಂದ ಶಿವಗಿರಿ ಕ್ರೆಡಿಟ್ ಸೊಸೈಟಿಯು ನಿರಂತರ ಸೇವೆಯನ್ನು ಒದಗಿಸುತ್ತಾ ಬಂದಿದೆ. ಸಂಘದ ಸದಸ್ಯರ ಮಕ್ಕಳು ಹಾಗೂ ಸ್ಥಳೀಯ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಆಗಮಿಸಿದಕ್ಕೆ ದನ್ಯವಾದ, ನಿಮ್ಮ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು.
ಸೊಸೈಟಿಯ ಈ ಶ್ಲಾಘನೀಯ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಶಿವಗಿರಿ ಸೊಸೈಟಿಯ ಅಧ್ಯಕ್ಷರಾದ ಸುಜನ್ ಕುಮಾರ್ , ಬಿಲ್ಲವ ಸಂಘದ ಅಧ್ಯಕ್ಷರಾದ ಸುನಿಲ್ ಆರ್ ಪೂಜಾರಿ ಹಾಗು ಸೊಸೈಟಿಯ ಕಟ್ಟಡ ಮಾಲಿಕರು ಹಾಗು ಉದ್ಯಮಿಗಳಾದ ಸುನಿಲ್ ನಾಯ್ಕ ರವರು ವಿದ್ಯಾರ್ಥಿಗಳು ಹಾಗು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಸಂಘದ ಹಿತೈಷಿಗಳಾದ ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಡಾ. ಸುನೀತಾ ಬಂಗೇರರವರು 11000 ರೂ. ದೇಣಿಗೆ ನೀಡಿದರು.
ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಸ್ತಕಗಳನ್ನು ಪಡೆದುಕೊಂಡರು . ಸೊಸೈಟಿಯ ನಿರ್ದೇಶಕರುಗಳು ಹಾಗು ಸಿಬ್ಬಂದಿವರ್ಗ , ಬಿಲ್ಲವ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಗು ಮಹಿಳಾ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವ್ಯವಸ್ಥಾಪಕರಾದ ಚಂದ್ರ ಎಚ್ .ಪೂಜಾರಿ ನಿರೂಪಿಸಿ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 