ಶಿವಾಜಿ ಜಯಂತಿ: ಶಾಲಾ ಕಾಲೇಜುಗಳಿಗೆ ಶಿವಾಜಿ ಭಾವಚಿತ್ರ ವಿತರಣೆ
Shivaji Jayanti: Shivaji portraits distributed to schools and colleges
ಲೋಕದರ್ಶನ ವರದಿ
ಬೆಳಗಾವಿ 21: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಜಿಲ್ಲಾಡಳಿತದಿಂದ ವಿಜೃಂಭಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿವಾಜಿಮಹಾರಾಜರ 100 ಭಾವಚಿತ್ರಗಳು ಹಾಗೂ ಅವರ ಜೀವನ ಚರಿತ್ರೆ ಮತ್ತು ಸಾಧನೆಗಳನ್ನು ಪರಿಚಯಿಸುವ ಜಾಗೃತಿ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು. ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಶಿವಾಜಿ ಮಹಾರಾಜರ ಶೌರ್ಯ, ನಾಯಕತ್ವ, ಧರ್ಮನಿಷ್ಠೆ ಮತ್ತು ದೇಶ ಭಕ್ತಿ ಕುರಿತಾಗಿ ಮಾತನಾಡಿದರು. ಯುವ ಪೀಳಿಗೆಗೆ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ, ಜೀವನದ ಪ್ರೇರಣೆ ದೊರೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಗಳನ್ನು ಬೆಳಗಾವಿ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ವಿತರಿಸಲಾಯಿತು. ಇದರ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಶಿವಾಜಿಮಹಾರಾಜರ ಜೀವನ ಚರಿತ್ರೆ ಮತ್ತು ಅವರ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಮಹತ್ವದ ಹೆಜ್ಜೆ ಇದಾಗಿತ್ತು. ಈ ಕಾರ್ಯಕ್ರಮದ ಪ್ರಾಯೋಜಕರಾಗಿ ಆಕಾಶ ಹಲಗೇಕರ್ ಅವರು ಸಹಕರಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 