ಶಿವಾಜಿ ಸ್ಮಾರಕ ಕಟ್ಟಡ ಕಾಂಕ್ರೀಟ್ ಪೂಜೆ

Shivaji Memorial Building Concrete Puja

ಬೆಳಗಾವಿ 16: ಬೆಳಗಾವಿಯ ಪೀರನವಾಡಿ ಸರ್ಕಲ್ ನಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಪೂಜೆ ಸಲ್ಲಿಸಿ, ಚಾಲನೆ ನೀಡಿದರು. 

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದು, ದೇಶದಲ್ಲೇ ಎತ್ತರದ ಶಿವಾಜಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿಸಿದ್ದಾರೆ. ಇಂದು ದೇಶ ವಿದೇಶಗಳಿಂದ ಜನರು ವೀಕ್ಷಣೆಗೆ ಬರುತ್ತಿದ್ದಾರೆ. ಅಭಿವೃದ್ಧಿಗೆ ಇನ್ನೊಂದು ಹೆಸರು ಎನ್ನುವ ರೀತಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಕೆಲಸ ಮಾಡುತ್ತಿದ್ದಾರೆ ಎಂದು ಮೃಣಾಲ್ ಹೆಬ್ಬಾಳಕರ್ ತಿಳಿಸಿದರು. 

ಈ ವೇಳೆ ಸಚಿನ್ ಗೋರ್ಲೆ, ವೀರ ಪಾಟೀಲ, ಸ್ಥಳೀಯ ನಿವಾಸಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.