ಶಿವಕುಮಾರ ಶ್ರೀ, ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆಗೆ ಆದ್ಯತೆ- ಸಿಎಂ
ಬೆಂಗಳೂರು, ಜೂ 12, ತುಮಕೂರಿನ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಯ ಜನ್ಮಸ್ಥಳ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿಗಳು ಸಿದ್ಧವಾಗಿದ್ದು, ಅವುಗಳನ್ನು ಹಂತ ಹಂತವಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಧಿಕಾರಿಗಳು ಲಾಕ್‌ಡೌನ್‌ನಿಂದ ಪ್ರವಾಸೋದ್ಯಮ ಇಲಾಖೆಗೆ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ನೀಡಿದರು. ಪ್ರವಾಸೋದ್ಯಮ ವಲಯಕ್ಕೆ ಲಾಕ್‌ಡೌನ್‌ನಿಂದ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ.ಎಸ್.ಟಿ.ಡಿ.ಸಿ. ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದರು.ಆರ್ಥಿಕ ವರ್ಷದಲ್ಲಿ ಕೆಎಸ್ ಟಿಡಿಸಿ ಕಳೆದ 12 ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 6.23 ಕೋಟಿ ಲಾಭ ಪಡೆದಿದೆ. ಅಂತೆಯೇ ಜಂಗಲ್ ಲಾಡ್ಜಸ್ 7.86 ಕೋಟಿ ಲಾಭ ಪಡೆದಿದೆ ಎಂದು ತಿಳಿಸಿದರು.ಅಧಿಕಾರಿಗಳು, ಕೋವಿಡ್ 19 ನಿಯಂತ್ರಿಸಲು ಲಾಕ್‌ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ಎರಡು ಸಾವಿರ ರೂ. ಗಳಂತೆ ಒಟ್ಟು 3.21 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದರು.ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಸಿಲುಕಿಕೊಂಡ 6780 ವಿದೇಶಿ ಪ್ರವಾಸಿಗರನ್ನು ಸ್ವದೇಶಗಳಿಗೆ ಹಿಂತಿರುಗಲು ಸಮನ್ವಯ ಸಾಧಿಸಲಾಗಿದ್ದು, ಈ ಬಗ್ಗೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪ್ರವಾಸೋದ್ಯಮ ಸಚಿವ ಸಿ..ಟಿ. ರವಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 