ಮಕ್ಕಳಲ್ಲಿ ದೇವರನ್ನು ಕಂಡ ಶಿವಕುಮಾರ ಸ್ವಾಮೀಜಿ
Shivakumara Swamiji saw God in children
ಶಿಗ್ಗಾವಿ 23 : ಅನ್ನ, ಅರಿವು ಮತ್ತು ಆಶ್ರಯದ ತ್ರಿವಿಧ ದಾಸೋಹದ ಮೂಲಕ ಕನ್ನಡ ನಾಡಿನ ಮಠ, ಪರಂಪರೆಗಳಿಗೆ ಮಾದರಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಎಂದು ಹಾವೇರಿ ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ತಾಲೂಕಿನ ಮುಗಳಿ ಗ್ರಾಮದ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಬಳಗ ವತಿಯಿಂದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮಿಗಳ 7ನೇ ವರ್ಷದ ಪುಣ್ಯಸ್ಮರಣೆ ಹಾಗೂ ದಾಸೋಹ ದಿನಾಚರಣೆ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ನಮ್ಮ ನಾಡಿನಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರವೂ ದಾಸೋಹ ಪರಂಪರೆಯಿದೆ.
ಸರ್ಕಾರಗಳು ಮಾಡದ ಸಮಾಜಮುಖಿ ಕಾರ್ಯಗಳನ್ನು ಮಠಗಳು ಮಾಡಿವೆ. ಸಮಾಜದ ಎಲ್ಲ ಸ್ತರದ ಮಕ್ಕಳ ಜ್ಞಾನ ಮತ್ತು ಅವರ ಹೊಟ್ಟೆಯ ಹಸಿವನ್ನು ನಿವಾರಿಸಿದ ಹಾಗೂ ವಿಶೇಷವಾಗಿ ಮಠದ ಮಕ್ಕಳ ಕಾಳಜಿ ಮಾಡುತ್ತ ಅವರಲ್ಲಿ ದೇವರನ್ನು ಕಂಡವರು ಶಿವಕುಮಾರ ಸ್ವಾಮಿಗಳ ವ್ಯಕ್ತಿತ್ವ ನಮಗೆ ಆದರ್ಶ ಎಂದರು. ಹಿರಿಯ ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ಮಾತನಾಡಿ ನಮ್ಮದು ಕೃಷಿ ಪರಂಪರೆ, ಸಾಮಾಜಿಕ ವ್ಯವಸ್ಥೆಯಲ್ಲಿ ದಾಸೋಹ ತತ್ವ ಮೊದಲಿನಿಂದಲೂ ಇದೆ. ಆದರೆ ಮಠ ಪರಂಪರೆಯಲ್ಲಿ ತ್ರಿವಿಧ ದಾಸೋಹದ ಮೂಲಕ ಇಡೀ ನಾಡಿನ ಬಡ ಮಕ್ಕಳ ಶೈಕ್ಷಣಿಕ ಬದುಕನ್ನು ರೂಪಿಸಿದ ಶ್ರೇಯಸ್ಸು ಸಿದ್ದಗಂಗಾ ಮಠಕ್ಕೆ ಸಲ್ಲುತ್ತದೆ ಎಂದರು.
ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ ತ್ರಿವಿಧ ದಾಸೋಹ ತತ್ವಕ್ಕೆ ಹೊಸ ರೂಪ ನೀಡಿದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಿಸಬೇಕು ಎಂದರು. ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಟಿ.ಕೆ. ಪಾಟೀಲ ಮಾತನಾಡಿ ನಮ್ಮ ಮುಗಳಿ ಗ್ರಾಮ ಮೊದಲಿನಿಂದಲೂ ಶೈಕ್ಷಣಿಕ ಕಾಳಜಿಗೆ ಆದ್ಯತೆ ನೀಡುತ್ತ ಬಂದಿದೆ. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಹೆಸರಿನಲ್ಲಿ ಪ್ರತಿ ಬೇಸಿಗೆಯಲ್ಲಿ ಶಿಬಿರ ಆಯೋಜಿಸಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಸಹಕಾರ ನೀಡಬೇಕು ಎಂದರು. ಸುಜಲಾನ್ ಸಿಎಸ್‌ಆರ್ ಕೇಂದ್ರೀಯ ವ್ಯವಸ್ಥಾಪಕ ದೀಪಕ ಕ್ಷೀರಸಾಗರ, ಎರಡು ಸಾವಿರ ಗುಬ್ಬಚ್ಚಿ ಗೂಡುಗಳನ್ನು ಶಾಲೆಗೆ ನೀಡಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ಜರುಗಿದ ದಾಸೋಹ ದಿನಾಚರಣೆ ಕಾರ್ಯಕ್ರಮದಲ್ಲಿ ಗ್ರಾಮದ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಬಳಗದ ಅಧ್ಯಕ್ಷ ಶಿವಪ್ಪ ಅರಳಿಕಟ್ಟಿ,ಮುಖಂಡರಾದ ಶಿವಾನಂದ ರಾಮಗೇರಿ, ತಿಪ್ಪಣ್ಣ ಸಾತಣ್ಣವರ, ಎಸ್.ವಿ. ಕಟಗಿಹಳ್ಳಿಮಠ, ಸಿ.ಎನ್. ಕುಂಬಾರ, ಶಂಭುಲಿಂಗಪ್ಪ ರಾಮಗೇರಿ, ಎಚ್.ಎಫ್. ಅಕ್ಕಿ, ಶಿವಾನಂದ ಕುನ್ನೂರ,ಶರಣಪ್ಪ ಕಂದಗಲ್ಲ,ವಿ.ಜಿ.ದುಂಡಪ್ಪನವರ, ಶಂಕರಗೌಡ ಪಾಟೀಲ, ಎಸ್‌ಡಿಎಂಸಿ ಅಧ್ಯಕ್ಷ ಸೋಮಣ್ಣ ಸಕ್ತಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೇಣುಕಾ ಬಿಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ನಿಂಗಪ್ಪ ದುಂಡಪ್ಪನವರ, ಶಿವಾನಂದ ಬಿಶೆಟ್ಟಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎ. ಮೀರಾಬಾಯಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಈಶ್ವರ ಕಾಲವಾಡ, ಮಲ್ಲಿಕಾರ್ಜುನ ಯುವಕ ಸಂಘದ ಅಧ್ಯಕ್ಷ ಶಂಕರ ಗೊಬ್ಬಿ ಉಪಸ್ಥಿತರಿದ್ದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 