ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಮುಖ್ಯ: ಪ್ರಾಚಾರ್ಯ ಡಾ. ಎಸ್.ಸಿ. ಕಮತೆ
Shivalingeshwara Jatra Festival of the Siddha Sansthan Mutt in Savalagi
ಲೋಕದರ್ಶನ ವರದಿ
ಸಾವಳಗಿ ಸಿದ್ದ ಸಂಸ್ಥಾನ ಮಠದ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ
ಬೆಳಗಾವಿ 10: ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪಾಲಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಂಸ್ಕಾರ, ಶಿಸ್ತು ಹಾಗೂ ಮೌಲ್ಯಾಧಾರಿತ ಶಿಕ್ಷಣ ಜವಾಬ್ದಾರಿ ಪಾಲಕರ ನೀಡುವ ಮೇಲಿದೆ ಎಂದು ನಿಡಸೋಸಿ ಹಿರಾಶುಗರ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಸಿ.ಕಮತೆ ಹೇಳಿದರು.
ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಸಿದ್ದ ಸಂಸ್ಥಾನ ಮಠದಲ್ಲಿ ಜರುಗುತ್ತಿರುವ 2026ನೇ ಸಾಲಿನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಉಪನ್ಯಾಸ ನೀಡಿದರು.
"ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯುವ ಮೂಲಕ ಅವರ ಆಸಕ್ತಿ, ಸಾಮರ್ಥ್ಯ ಅರಿತು ಪ್ರೋತ್ಸಾಹ ನೀಡಬೇಕು. ಸಮಾಜಮುಖಿ ಚಿಂತನೆ ಹಾಗೂ ದೇಶಪ್ರೇಮದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಿದರೆ ಆರೋಗ್ಯಕರ ಸಮಾಜ ಸಾಧ್ಯ,''ಎಂದರು.
ಪ್ರಗತಿಪರ ರೈತ ಸುಧೀರ ಕತ್ತಿ ಕಬ್ಬು ಬೆಳೆ ಕುರಿತು ಮಾತನಾಡಿ, ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಂಡರೆ ಕಬ್ಬಿನ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಬಹುದು. ಉತ್ತಮ ಗುಣಮಟ್ಟದ ಬೀಜ, ಸಮರ್ಪಕ ಗೊಬ್ಬರ ನಿರ್ವಹಣೆ, ನೀರಾವರಿ ವ್ಯವಸ್ಥೆ ಹಾಗೂ ವೈಜ್ಞಾನಿಕ ವಿಧಾನ ಅನುಸರಿಸಿದರೆ ಪ್ರತಿ ಎಕರೆಗೆ 80ರಿಂದ 120 ಟನ್ ಕಬ್ಬು ಇಳುವರಿ ಪಡೆಯಲು ಸಾಧ್ಯ,''ಎಂದು ತಿಳಿಸಿದರು.
ಪೀಠಾಧಿಪತಿ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಾನಾ ಗಣ್ಯರು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 