ಬೆಂಗಳೂರು, ಆ 9 ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜಾನುವಾರುಗಳು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಅನೇಕ ರಸ್ತೆ ಸಂಪರ್ಕ ರಸ್ತೆಗಳು, ಸೇತುವೆಗಳು ಮಳೆನೀರಿನಿಂದ ಕೊಚ್ಚಿಕೊಂಡು ಹೋಗಿವೆ.
ವಿಶೇಷವಾಗಿ ಯಲ್ಲಾಪುರ ಮತಕ್ಷೇತ್ರದಲ್ಲಿ ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಕೂಲೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಮಂಜೂರು ಮಾಡಬೇಕಾಗಿದೆ. ಹೀಗಾಗಿ ಮುಖ್ಯಮಂತ್ರಿಗಳು ತ್ವರಿತವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಥಳ ಸಮೀಕ್ಷೆ ಮಾಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡುವುದು ಅವಶ್ಯಕವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.