ಸಬ್ ರಿಜಿಸ್ಟ್ರಾರ್ ಬಂಧನಕ್ಕೆ ಶಿವಶಂಕರ್ ಒತ್ತಾಯ
Shivashankar demands arrest of Sub-Registrar
ಲೋಕದರ್ಶನ ವರದಿ
ಬಳ್ಳಾರಿ, ಆ.31: ಜಾತಿ ದೌರ್ಜನ್ಯ, ಹಲ್ಲೆ ಹಾಗೂ ಕೊಲೆ ಬೆದರಿಕೆ ಆರೋಪ ಎದುರಿಸುತ್ತಿರುವ ಸಿರುಗುಪ್ಪ ಸಬ್ ರಿಜಿಸ್ಟ್ರಾರ್ ಯಲ್ಲಾಪ್ಪ ರೆಡ್ಡಿ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಹಲ್ಲೆಗೊಳಗಾದ ದಲಿತ ರೈತ ಎಚ್. ಗಾಳೆಪ್ಪ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಎಸ್. ಶಿವಶಂಕರ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಸಿರುಗುಪ್ಪ ತಾಲೂಕು ಅಧ್ಯಕ್ಷ ಮಾರುತಿ, ಆ.13ರಂದು ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಎಚ್. ಗಾಳೆಪ್ಪ ಅವರ ಮೇಲೆ ಯಲ್ಲಾಪ್ಪ ರೆಡ್ಡಿ ಹಾಗೂ ಇತರರು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಯಲ್ಲಾಪ್ಪ ರೆಡ್ಡಿ ಸೇರಿದಂತೆ ಆರು ಮಂದಿ ವಿರುದ್ಧ ಕೊಲೆ ಬೆದರಿಕೆ, ಹಲ್ಲೆ ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಪ್ರಕರಣ ದಾಖಲಾಗಿ ಹಲವು ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಆರೋಪಿ ಯಲ್ಲಾಪ್ಪ ರೆಡ್ಡಿ ಅವರು ಆ.17ರಂದು ಧಾರವಾಡದ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಹಳೇಕೋಟೆ ಹಾಗೂ ದೇವಲಾಪುರ ಗ್ರಾಮಗಳ ವ್ಯಾಪ್ತಿಯ ಸರ್ವೇ ನಂಬರ್‌ಗಳಿಗೆ ಸೇರಿದ ಸುಮಾರು 143 ಎಕರೆ 32 ಸೆಂಟ್ಸ್ ಜಮೀನನ್ನು ಕರ್ನಾಟಕ ಸರ್ಕಾರದ ಹೆಸರಿಗೆ ನಮೂದಿಸಿರುವ ಆದೇಶದ ಪ್ರತಿಗಳು ದೊರೆತಿದ್ದು, ಇದು ರೈತರ ಹೋರಾಟಕ್ಕೆ ದೊರೆತ ಮಹತ್ವದ ಜಯವಾಗಿದೆ ಎಂದು ಮುಖಂಡರು ಹೇಳಿದರು. ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸರ್ಕಾರ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಗಾಳೆಪ್ಪ ಅವರಿಗೆ ಸೂಕ್ತ ಭದ್ರತೆ ಒದಗಿಸುವುದು, ಆರೋಪಿಗಳನ್ನು ಬಂಧಿಸುವುದು ಹಾಗೂ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮುನಿಯಪ್ಪ, ಮಲ್ಲಯ್ಯ, ಒಬ್ಳೆಶ್ವರ್ಪ, ಮಾರುತಿ ಗಾಳೆಪ್ಪ, ನಾಗರಾಜ್ ಹಾಗೂ ಬಸಪ್ಪ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 