ಬೆಳಗಾವಿ, ಜ 14 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಜ 14 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆಯಲಿದೆ.
ಸಿದ್ಧರಾಮೇಶ್ವರ ಭಾವ ಚಿತ್ರದ ಭವ್ಯ ಮೆರವಣಿಗೆ ಬೆಳಗ್ಗೆ 9.30 ಕ್ಕೆ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಕಿತ್ತೂರು ಚನ್ನಮ್ಮ ವೃತ್ತ, ಜಿಲ್ಲಾ ಆಸ್ಪತ್ರೆ ರಸ್ತೆ, ಬಿ.ಡಿ.ಜತ್ತಿ ಬಿ.ಎಡ್ ಕಾಲೇಜು ಮಾರ್ಗವಾಗಿ ಕುಮಾರ ಗಂಧರ್ವ ಕಲಾಮಂದಿರ ತಲುಪಲಿದೆ.
ಬಳಿಕ ಬೆಳಗ್ಗೆ 11.30 ಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರುಗಳು ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ.
ಬೆಳಗಾವಿ ಉತ್ತರ ವಲಯ ಶಾಸಕ ಅನಿಲ.ಎಸ್.ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ತಿನ ಸಕರ್ಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಆಶಾ ಐಹೊಳೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದಶರ್ಿ ಶಂಕರಗೌಡ ಪಾಟೀಲ ಹಾಗೂ ಕುಡಚಿ ಮತಕ್ಷೇತ್ರದ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.
ಆರ್ಪಿ.ಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಚ್.ಬಿ.ಕೋಲಕಾರ ಉಪನ್ಯಾಸ ನೀಡಲಿದ್ದು ಸೋಮಲಿಂಗಪ್ಪ ಜಾಲಿಹಾಳ ಮತ್ತು ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.