ಶ್ರೀನಗರ, ಏ 22,ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‌ನಲ್ಲಿ ಭದ್ರತಾ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ಕು ಉಗ್ರರು ಬುಧವಾರ ಸಾವನ್ನಪ್ಪಿದ್ದಾರೆ.ಮಂಗಳವಾರ ತಡರಾತ್ರಿ ಶೋಪಿಯಾನ್‌ನ ಮೆಲ್ಹೂರಾದಲ್ಲಿ ಜಮ್ಮು ಕಾಶ್ಮೀರ ಪೊಲೀಸ್, ಸೇನೆ ಮತ್ತು ಆರ್‌ಪಿಎಫ್‌ನ ವಿಶೇಷ ಕಾರ್ಯಾಚರಣೆ ಗುಂಪು ಜಂಟಿ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿರ್ದಿಷ್ಟ ಪ್ರದೇಶವೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ತೆರಳಿದ ಕಾರ್ಯಪಡೆಯ ಮೆಲೆ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಏಕಾಏಕಿ ಗುಂಡು ಹಾರಿಸಲು ಆರಂಭಿಸಿದರು. ಇದೇ ವೇಳೆ ಭದ್ರತಾ ಪಡೆಗಳೂ ಸಹ ತಿರುಗೇಟು ನೀಡಿದವು ಎಂದು ಅವರು ಹೇಳಿದ್ದಾರೆ. "ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಪ್ರತೀಕಾರ ತೀರಿಸಿಕೊಂಡಿವೆ. ಕತ್ತಲಿನ ಲಾಭ ಪಡೆದು ಉಗ್ರರು ಪರಾರಿಯಾಗುವುದನ್ನು ತಪ್ಪಿಸಲು ಹೆಚ್ಚುವರಿ ಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿದ್ದು, ಕಾರ್ಯಚರೆ ಮುಂದುವರಿದಿದೆ” ಎಂದಿದ್ದಾರೆ. ಜಿಲ್ಲೆಯಲ್ಲಿ ಒಂದು ವಾರದೊಳಗೆ ಭದ್ರತಾ ಪಡೆಗಳು ನಡೆಸುತ್ತಿರುವ ಎರಡನೇ ಕಾರ್ಯಾಚರಣೆ ಇದಾಗಿದೆ. ಏಪ್ರಿಲ್ 17 ರಂದು ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿದೆ.