ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬು ಹೊಲಕ್ಕೆ ಬೆಂಕಿ: ರೈತನಿಗೆ ಭಾರೀ ನಷ್ಟ!
Short circuit causes fire in sugarcane field: Huge loss for farmer!
ಮುಂಡಗೋಡ 13 : ಮುಂಡಗೋಡದಿಂದ ಯಲ್ಲಾಪುರ ಕಡೆಗೆ ಸಂಪರ್ಕಿಸುವ ಮುಖ್ಯರಸ್ತೆಯ ಸಮೀಪದಲ್ಲಿರುವ ಸಾವಕ್ಕ ಜೀವನ ಅಗಡಿ ಅವರಿಗೆ ಸೇರಿದ ಹೊಲದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಾಹಿತಿಯಂತೆ, ಒಟ್ಟು 10 ಎಕರೆ ವ್ಯಾಪ್ತಿಯ ಈ ಹೊಲದಲ್ಲಿ ಒಂದು ಎಕರೆ ಪ್ರದೇಶದಲ್ಲಿ ಬೀಜಕ್ಕಾಗಿ ಸಂಗ್ರಹಿಸಿ ಇಡಲಾಗಿದ್ದ ಕಬ್ಬು ಹಾಗೂ 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕುಳೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಸಂಪೂರ್ಣ ಹಾನಿಗೊಳಗಾಗಿದೆ. ಜೊತೆಗೆ, ಹೊಲದಲ್ಲಿ ಅಳವಡಿಸಿದ್ದ ಪೈಪ್ಲೈನ್ ಮತ್ತು ಜೆಟ್ ವ್ಯವಸ್ಥೆಯೂ ಬೆಂಕಿಯಿಂದ ಹಾನೀಗೀಡಾಗಿದೆ. ತಟ್ಟಿಹಳ್ಳಿ ಸರ್ವೇ ನಂಬರ್ 16 ಮತ್ತು 17 ರಲ್ಲಿರುವ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ.
ಹೊಲದ ಮೇಲ್ಭಾಗದಿಂದ ಹಾದು ಹೋಗಿರುವ ಥ್ರೀ-ಫೇಸ್ ವಿದ್ಯುತ್ ಲೈನ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿರಬಹುದೆಂದು ಹೊಲದ ಮಾಲೀಕ ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಶ್ರಮಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ, ಹೊಲದಲ್ಲಿ ಸಂಗ್ರಹಿಸಿ ಇಡಲಾಗಿದ್ದ ಕಬ್ಬಿನ ಬೀಜ ಸಂಪೂರ್ಣ ಸುಟ್ಟುಹೋಗಿದ್ದು, ರೈತನಿಗೆ ಗಮನಾರ್ಹ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಹಾನಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 