ತೋಟದ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ: ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಆರೋಪ
Shortage of Kannada teachers in plantation schools: Allegations of hindrance to students' education
ಲೋಕದರ್ಶನ ವರದಿ
ಸಂಬರಗಿ ಜು. 7: ಗಡಿ ಗ್ರಾಮಗಳಲ್ಲಿ ಕನ್ನಡ ಭಾಷೆ ಕಲಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಕನ್ನಡ ಮಾಧ್ಯಮಕ್ಕೆ ಒತ್ತು ನೀಡುತ್ತಿದ್ದರೂ, ಕೆಲವು ತೋಟದ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆಯಿಂದ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಕಲಿಯುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಶಿಕ್ಷಕರ ಸಂಖ್ಯೆ ಕಡಿಮೆಯಾಗುತ್ತಿದೆ. ಕೆಲವು ತೋಟದ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವುದರಿಂದ ಕನ್ನಡ ಭಾಷಾ ಬೋಧನೆಗೆ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಶಿಕ್ಷಕರ ಕೊರತೆಯಿಂದಾಗಿ ಕಿರಿಯ ಪ್ರಾಥಮಿಕ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಯಾವುದೇ ಶಾಲೆಗಳನ್ನು ಮುಚ್ಚಬಾರದು ಎಂದು ಸರ್ಕಾರ ಆದೇಶಿಸಿದ್ದರೂ, ಕೆಲವು ಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರನ್ನು ತೋಟದ ಶಾಲೆಗಳಿಗೆ ತಾತ್ಕಾಲಿಕವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಆದರೆ ಆ ಶಿಕ್ಷಕರು ಯಾವ ಭಾಷೆಯಲ್ಲಿ ಪಾಠ ಮಾಡುತ್ತಾರೆ ಎಂಬುದನ್ನು ಪರಿಗಣಿಸದೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತೋಟದ ಶಾಲೆಗಳಲ್ಲಿ ಕನ್ನಡ ಭಾಷೆಯ ಶಿಕ್ಷಕರು ಲಭ್ಯವಿಲ್ಲದ ಕಾರಣ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಈ ಕುರಿತು ತಾಲೂಕು ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.
ನಾಗನೂರ ಪಿ.ಎ. ತೋಟದ ಶಾಲೆ, ಪಾಂಡೇಗಾಂವ ತೋಟದ ಬನಾಯಿ ಶಾಲೆ, ಪಾಂಡೇಗಾಂವ ಗ್ರಾಮದ ಶಾಲೆ, ಜಕ್ಕಾರಟ್ಟಿ ಗ್ರಾಮದ ಶಾಂತಿನಗರ ತೋಟದ ಶಾಲೆ ಸೇರಿದಂತೆ ಹಲವು ತೋಟದ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ತಾತ್ಕಾಲಿಕವಾಗಿ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲ ಶಿಕ್ಷಕರು ಶಾಲೆಗೆ ತೆರಳಿ ಹಾಜರಾತಿ ನೀಡಿ ಮರಳುತ್ತಿದ್ದು, ವಿದ್ಯಾರ್ಥಿಗಳಿಗೆ ಸಮರ್ಕವಾಗಿ ಪಾಠ ಮಾಡುತ್ತಿಲ್ಲ ಎಂಬ ದೂರುಗಳಿವೆ.
6ನೇ ತರಗತಿಯಿಂದ ಹಿಂದಿ ಭಾಷೆ ಇರುವುದರಿಂದ ಕೆಲವು ತೋಟದ ಶಾಲೆಗಳಲ್ಲಿ ಹಿಂದಿ ವಿಷಯದ ಶಿಕ್ಷಕರ ಅಗತ್ಯವಿಲ್ಲದಿದ್ದರೂ ಅಂತಹ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.
ಕೆಲವು ಮರಾಠಿ ಶಾಲೆಗಳ ಮುಖ್ಯ ಶಿಕ್ಷಕರನ್ನು ಕನ್ನಡ ತೋಟದ ಶಾಲೆಗಳಿಗೆ ಪ್ರಭಾರಿ ಮುಖ್ಯ ಶಿಕ್ಷಕರಾಗಿ ತಾತ್ಕಾಲಿಕವಾಗಿ ನೇಮಕ ಮಾಡಿರುವುದು ಕನ್ನಡ ಭಾಷೆಗೆ ಅನ್ಯಾಯವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಂ. ಮುಂಜೆ ಅವರನ್ನು ಸಂಪರ್ಕಿಸಿದಾಗ, ವಿಷಯವನ್ನು ಪರೀಶೀಲಿಸಿ ತೋಟದ ಶಾಲೆಗಳಿಗೆ ನಿಯೋಜಿಸಿರುವ ಮರಾಠಿ ಶಿಕ್ಷಕರನ್ನು ಮೂಲ ಶಾಲೆಗಳಿಗೆ ವರ್ಗಾವಣೆ ಮಾಡಿ, ಅಗತ್ಯವಿರುವ ಕಡೆ ಕನ್ನಡ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 