ನಾಗೂರ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮ

ನಾಗೂರ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮ  Shravana month discourse program in Nagur village


ತಾಳಿಕೋಟಿ 18 : ತಾಳಿಕೋಟಿ ತಾಲೂಕಿನ ನಾಗೂರ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಆ.17ರಿಂದ 20ರವರೆಗೆ ನಾಲ್ಕು ದಿನಗಳ ಕಾಲ   ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ   ಸಿದ್ದಲಿಂಗ ದೇವರಿಂದ ಪ್ರವಚನ ಹಾಗೂ ಮನೆ ಮನೆ ಆಶೀರ್ವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕಾಗಿ ಗ್ರಾಮಕ್ಕೆ ಆಗಮಿಸಿದ ಪೂಜ್ಯರನ್ನು ಗ್ರಾಮದ ಪ್ರಮುಖರು ಹಾಗೂ ಸದ್ಭಕ್ತರು ಕುಂಭ, ಕಳಸ ಮತ್ತು ಡೊಳ್ಳಿನ ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಆಶೀರ್ವಚನ ನೀಡಿದ   ಸಿದ್ದಲಿಂಗ ದೇವರು, ಯುವಕರು ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನ ನಡೆಸಬೇಕು ಎಂದು ಕರೆ ನೀಡಿದರು. ಮೊದಲ ದಿನದ ಪ್ರವಚನ ಕಾರ್ಯಕ್ರಮದ ಬಳಿಕ ಭಕ್ತರಿಗೆ ಅನ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.