ಮಹಿಳೆಯರು ಸ್ವಾವಲಂಬಿಗಳಾಗಲು ಧರ್ಮಸ್ಥಳ ಸಂಘದ ಕಾರ್ಯ ಶ್ಲಾಘನಿಯ: ಸಿದ್ದಲಿಂಗಶ್ರೀ
Siddalingashree praises Dharmasthala Sangha's work to help women become self-reliant
ನೇಸರಗಿ 16: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು, ಅರೋಗ್ಯ ತಪಾಸಣೆ, ದೇವಸ್ಥಾನಗಳ ಅಭಿವೃದ್ಧಿ, ಗ್ರಾಮೀಣ ಅಭಿವೃದ್ಧಿ, ಮೂಲಭೂತ ಸೌಕರ್ಯ, ಇನ್ನೂ ಅನೇಕ ಮಾನವನ ಅಭಿವೃದ್ಧಿಗೆ ಅನೇಕ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ವೀರೇಂದ್ರ ಹೆಗಡೆ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ ನಿರಂತರವಾಗಿ ಮಾಡುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಂದು ಅತಿಯಾಗಿ ವಿನಾಕಾರಣ ಖರ್ಚು ಮಾಡದೇ ಮಿತವಾಗಿ ಜೀವನ ನಡೆಸಿ ಜೀವನದಲ್ಲಿ ಬೆಳವಣಿಗೆ ಹೊಂಡಬೇಕು ಎಂದು ಸುತಗಟ್ಟಿ ಗ್ರಾಮದ ಹಿರೇಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೈಲಹೊಂಗಲ ತಾಲೂಕಾ ಯೋಜನಾ ಕಚೇರಿ ವ್ಯಾಪ್ತಿಯ ಸುತಗಟ್ಟಿ ಗ್ರಾಮದಲ್ಲಿ ಸಂಜೀವಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸಾಯಿ ದೀಪ ಕಣ್ಣಿನ ಆಸ್ಪತ್ರೆ ಬೆಳಗಾವಿ ಮತ್ತು ಇಶಾ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬೈಲಹೊಂಗಲ ಇವರ ಸಹಯೋಗದಲ್ಲಿ ಉಚಿತ ಥೈರೈಡ್ ಮತ್ತು ಕಣ್ಣಿನ ತಪಾಸಣಾ ಶಿಬಿರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮಾಜಿ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರು, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ತುಬಾಕಿ ಅತಿಥಿಗಳಾಗಿ ಆಗಮಿಸಿದ್ದರು. ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಸವರಾಜ ತುಬಾಕಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅನುಸೂಯ, ಉಪಾಧ್ಯಕ್ಷ ಪಾರ್ವತಿ, ಸಾಯಿ ದೀಪ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಅಭೀಧಲಿ, ಇಶಾ ಆಸ್ಪತ್ರೆ ಸಿಬ್ಬಂದಿ ಸಂತೋಷ ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲೆಯ ವಿಮಾ ಸಮನ್ವಧಿಕಾರಿ ಧನಂಜಯ ಅವರು ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಸಂಘದ ಯೋಜನೆ ಕಾರ್ಯಕ್ರಮಗಳ ಬಗ್ಗೆ ಮಾತನಾಡಿ ಸಮುದಾಯ ಅಭಿವೃದ್ಧಿ, ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ, ಜಲಮಂಗಳ ಆರೋಗ್ಯ ರಕ್ಷಾ,ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ ಕಣ್ಣಿನ ಸಂರಕ್ಷಣೆ ಹೇಗೆ, ಕಣ್ಣುಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ, ದೃಷ್ಟಿದೋಷ ಹಾಗೂ ಕಣ್ಣಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು. ಹಾಗೂ 100 ಜನ ಸದಸ್ಯರ ಕಣ್ಣಿನ ತಪಾಸಣೆ ಹಾಗೂ ಥೈರಾಡ್ ಪರೀಕ್ಷೆ ಮಾಡಿಸಲಾಯಿತು. ಈ ಸಂದರ್ಭದಲ್ಲಿ ನಿರೂಪಣೆ ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ ನೆರವೇರಿದರೆ, ಸ್ವಾಗತವನ್ನು ವಲಯದ ಮೇಲ್ವಿಚಾರಕರಾದ ಪಕೀರಾ್ಪ ನೆರವೇರಿಸಿದರು. ಸೇವಾಪ್ರತಿನಿಧಿ ಪುಷ್ಪಾ ಹಾಗೂ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 