ಸಿದ್ದಮ್ಮ ಬಿರಾದಾರ ಸಾಧನೆ

Siddamma Biradar's achievement

ಸಿಂದಗಿ 09:ಇತ್ತೀಚಿಗೆ ರಾಣೆಬೆನ್ನೂರಿನ ಕೆ.ಎಲ್‌.ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿದ್ದ ಖೋ-ಖೋ ತಂಡದ ಆಯ್ಕೆಯ ಪಂದ್ಯಾವಳಿಯಲ್ಲಿ ಸಿಂದಗಿ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಿದ್ದಮ್ಮ ಶಂಕರಗೌಡ ಬಿರಾದಾರ ಪಾಲ್ಗೊಂಡು ಉತ್ತಮ ಸಾಧನೆ ಮಾಡಿ ವಿಶ್ವವಿದ್ಯಾಲಯ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾರೆ.  

ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಶಿವಮಾಂತ ಪೂಜಾರಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.