ಸಿದ್ಧಪ್ಪ ಕಂಬಳಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ
Siddappa Kambali Memorial Program
ಲೋಕದರ್ಶನ ವರದಿ
ಹುಬ್ಬಳ್ಳಿ 27 : ಹುಬ್ಬಳ್ಳಿಯಲ್ಲಿ ಹುಟ್ಟಿ ಬೆಳೆದ ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ಮುಂಬೈ ಪ್ರೆಸಿಡೆನ್ಸಿಯಲ್ಲಿ ಹಲವಾರು ಖಾತೆಗಳಲ್ಲಿ ಸಚಿವರಾಗಿದ್ದ ಅದರಲ್ಲೂ ಶಿಕ್ಷಣ ಖಾತೆ ಸಚಿವರಾಗಿದ್ದಾಗ ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಮರೆಯಲಾಗದ ಕೊಡುಗೆ ನೀಡಿದ ಸರ್ ಸಿದ್ಧಪ್ಪ ಕಂಬಳಿ ಅವರ ಪುಣ್ಯ ಸ್ಮರಣೆ ನಿಮಿತ್ತ ಪಾಲಿಕೆ ಎದುರಿಗೆ ಇರುವ ಸರ್ ಸಿದ್ಧಪ್ಪ ಕಂಬಳಿ ಅವರ ಮೂರ್ತಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡುವ ಮೂಲಕ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು. ಸರ್ ಸಿದ್ಧಪ್ಪ ಕಂಬಳಿ ಅವರು ಮಾಡಿದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ದಲಿತ ಕಾರ್ಮಿಕರ ಅಸಂಘಟಿತ ಒಕ್ಕೂಟದ ಅಧ್ಯಕ್ಷ ವಿಜಯ್ ಕರ್ರ, ಗೋಪಾಲ, ಗಂಗಾಧರ ಪೆರುರ್ , ಹಿರಿಯ ಕಾರ್ಮಿಕರು , ಮುಂತಾದವರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 