ಮುಕ್ತ ಚದುರಂಗ ಸ್ಪರ್ಧೆಯಲ್ಲಿ ಸಿದ್ಧಪ್ಪ ತೋರಣಗಟ್ಟಿ ಸಾಧನೆ
Siddappa Toranagatti's achievement in the open chess competition
ಲೋಕದರ್ಶನ ವರದಿ
ಹುಬ್ಬಳ್ಳಿ 22: ಚೇಕನಕೊಪ್ಪದ ಚೆನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದ ವಿದ್ಯಾರ್ಥಿ ಸಿದ್ಧಪ್ಪ ತೋರಣಗಟ್ಟಿ ಅವರು ನವನಗರದ ನಿವಾಸಿಗಳ ಹಿತೋದ್ಧಾರಕ ಸಂಘದ ಆಶ್ರಯದಲ್ಲಿ ಬಸವರಾಜ (ರಾಜು) ಶಿವಪ್ಪ ಬಿಳಿಗಾರ್ ಸ್ಮರಣಾರ್ಥ ನವನಗರದ ಈಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಮುಕ್ತ ಚದುರಂಗ ಸ್ಪರ್ಧೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸಿದ್ಧಪ್ಪ ತೋರಣಗಟ್ಟಿ ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಸಿದ್ಧಪ್ಪ ಅವರನ್ನು ಅಭಿನಂದಿಸಿದರು.
ವಚನ ಚದುರಂಗ ಸಂಸ್ಥೆ ಹಾಗೂ ಧಾರವಾಡ ಜಿಲ್ಲಾ ಚದುರಂಗ ಸಂಸ್ಥೆಯ ಅಧ್ಯಕ್ಷ ಪ್ರಾಧ್ಯಾಪಕ ಡಾ. ವಿಶ್ವನಾಥ ಪಿ. ಬಿಳಿಗಾರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಸುನೀತಾ ಮಾಳವದೆಕರ್, ಈಶ್ವರ ದೇವಸ್ಥಾನದ ಅಧ್ಯಕ್ಷ ಬಸವರಾಜ ಪಾಟೀಲ, ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಚದುರಂಗಾಸಕ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 