ಬೆಂಗಳೂರು, ನ. 9 : ರಾಮಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ನೀಡುವ ತೀರ್ಪನ್ನು ಗೌರವಿಸೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಾಡಿನ ಜನತೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡಬೇಕು. ತೀರ್ಪುಗೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ.