ಬೆಂಗಳೂರು, ಆ 22 ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತೆರೆಮರೆಯಲ್ಲಿ ಸಹಕರಿಸಿದ್ದರು ಎಂಬ ಆರೋಪದ ಬೆನ್ನಲ್ಲೆ
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಅವರೇ ಕಾರಣ ಎಂದು ನೇರವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮೊದಲಿಂದಲೂ ತಿಕ್ಕಾಟ ಇತ್ತು.ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕೆಂದು ಒತ್ತಾಯಿಸಿದ್ದರು. ಆದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ ಎಂದರು.
ಕುಮಾರಸ್ವಾಮಿ ಮುಖ್ಯಮಂತ್ತಿಯಾಗುವುದಕ್ಕೆ ತಮ್ಮ ಒಪ್ಪಿಗೆ ಇಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಆಪ್ತರೇ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಪಕ್ಷ ಮೈತ್ರಿ ಮಾಡಿಕೊಂಡು ಸಕರ್ಾರ ನಡೆಸುತ್ತಿದ್ದ ಕುಮಾರಸ್ವಾಮಿಗೆ ದಿನನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಕಿರಿಕಿರಿ ನಡುವೆ ಸಕರ್ಾರ ರಚನೆ ನಡೆಸುತ್ತಿದ್ದ ಕುಮಾರಸ್ವಾಮಿಗೆ ಈಗ ನಿರಾಳರಾಗಿದ್ದಾರೆ ಎಂದರು.