ಬೆಳಗಾವಿ : ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡುವ ಮೂಲಕ ವೇದಿಕೆಗೆ ನುಗ್ಗಲು ಹೈಡ್ರಾಮ್ ನಡೆಸಿದ್ದು, ಬಿಜೆಪಿ ಕಾರ್ಯಕರ್ತರ ಹಾಗೂ ಪೊಲೀಸರ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಘಟನೆ ನಡೆದಿದೆ.
ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಹಾಗೂ ಸಂವಿಧಾನ ಬಚಾವೋ ಕಾರ್ಯವನ್ನು ಕಾಂಗ್ರೆಸ್ ಪಕ್ಷವು ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದರು.
ಈ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಟ್ಟೆ ಪ್ರದರ್ಶನದ ಮೂಲಕ ಹೈಡ್ರಾಮ್ ಮಾಡಿದರು. ಈ ದೃಶ್ಯದಿಂದ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಕಾರ್ಯಕರ್ತರ ಹಾಗೂ ಪೊಲೀಸ ಅಧಿಕಾರಿಗಳ ವಿರುದ್ದ ಕೆಂಡಾಮಂಡಲವಾದ ಘಟನೆ ನಡೆಯಿತು.
ಈ ಘಟನೆಯಿಂದ ಕಾರ್ಯಕ್ರಮದಲ್ಲಿ ಕೆಲಹೊತ್ತು ತಿಳಿಯಾದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.