ಸಿದ್ದರಾಮಯ್ಯ ಜು.11ರಂದು ಹೂವಿನಹಡಗಲಿಗೆ ಭೇಟಿ
Siddaramaiah to visit Huvina Hadagali on July 11
ಲೋಕದರ್ಶನ ವರದಿ
ಹೂವಿನಹಡಗಲಿ 10: ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜುಲೈ 11ರಂದು ವಿಜಯನಗರ ಜಿಲ್ಲೆ ಹೂವಿನಹಡಗಲಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿರುವ ಅವರು, ಬೆಳಗ್ಗೆ 11.30ಕ್ಕೆ ಹೂವಿನಹಡಗಲಿಗೆ ಆಗಮಿಸಲಿದ್ದಾರೆ. ಬಳಿಕ ಅವರು ಕನಕ ಭವನಕ್ಕೆ ಭೇಟಿ ನೀಡಲಿದ್ದಾರೆ.
ನಂತರ ರೇಣುಕಾ ನಗರದ ರಂಗಭಾರತಿ ರಂಗಮಂದಿರದಲ್ಲಿ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ 86ನೇ ಜನ್ಮದಿನೋತ್ಸವದ ಅಂಗವಾಗಿ ಎಂ.ಪಿ. ಪ್ರಕಾಶ್ ಅವರ ಕಂಚಿನ ಪ್ರತಿಮೆ ಲೋಕಾರೆ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 3.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 