ಕುರಿಗಾಹಿಗಳ ರಕ್ಷಣೆಗೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಮಾ.30: ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗಕಡೆ ಜನ ಕುರಿಗಳನ್ನು ಹೊಡೆಯುವ, ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಾಕ್‌ಡೌನ್‌ನಿಂದಾಗಿ ತರಕಾರಿ, ಹಣ್ಣು, ಹೂ ಮಾರಾಟಕ್ಕೆ ಅವಕಾಶ ಇಲ್ಲದೆ ಇವುಗಳನ್ನು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಈ ಉತ್ಪನ್ನಗಳ ಅಲಭ್ಯತೆಯಿಂದಾಗಿ ಬಳಕೆದಾರರು ಕಂಗಾಲಾಗಿದ್ದಾರೆ. ರಾಜ್ಯಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ಉತ್ಪನ್ನಗಳನ್ನು ಖರೀದಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 