ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ: ಬಿ.ವೈ.ವಿಜಯೇಂದ್ರ
Siddaramaiah will resign : B.Y.Vijayendra
ಶಿವಮೊಗ್ಗ 04: ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದಲ್ಲಿಯೆ ಚರ್ಚೆಯಾಗುತ್ತಿದೆ. ಇದೇ ಕಾರಣಕ್ಕೆ ಸಚಿವ ಸತೀಶ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಆಯೋಜಿಸುವ ಮೂಲಕ ಸಿದ್ದರಾಮಯ್ಯ ರಾಜಕೀಯ ದಾಳ ಉರುಳಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಸಿದ್ಧರಿಲ್ಲ. ಅದೇ ರೀತಿ ಕಾಂಗ್ರೆಸ್‌ನಲ್ಲಿರುವ ವಿರೋಧಿ ಬಣ ಸಿದ್ಧರಾಮಯ್ಯ ಅವರನ್ನು ಸಿಎಂ ಸ್ಥಾನದಲ್ಲಿ ಉಳಿಸಲು ಸಿದ್ಧರಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧ ವರ್ಸಸ್ ಸಿದ್ಧ ಸ್ಥಿತಿ ಇದೆ ಎಂದು ಲೇವಡಿ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿರುವ ಸಂದರ್ಭ, ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಆಯೋಜಿಸಿರುವುದು ಕಾಂಗ್ರೆಸ್ ಪಕ್ಷದಲ್ಲಿನ ಒಳಬೇಗುದಿಯ ಫಲ ಎಂದು ಹೇಳಿದರು.
ಶಕ್ತಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೇ ಸಾರಿಗೆ ಸಂಸ್ಥೆಗಳು ಸಾವಿರಾರು ಕೋಟಿ ರೂಪಾಯಿ ನಷ್ಟದಲ್ಲಿವೆ. ಸಂಸ್ಥೆಗಳನ್ನು ಮುಚ್ಚುವ ದುಸ್ಥಿತಿ ಇದೆ. ಈಗ ಶೇ.15ರಷ್ಟು ಟಿಕೆಟ್ ದರ ಹೆಚ್ಚಳ ಮಾಡಿದ್ದಾರೆ. ಇದು ಮಹಿಳೆಯರಿಗೆ ಉಚಿತ, ಪುರುಷರಿಗೆ ದರ ಹೆಚ್ಚಳ ಖಚಿತ ಎಂಬಂತಾಗಿದೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವುದೇ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಎಂಬ ನಮ್ಮ ಆರೋಪ ನಿಜವಾಗಿದೆ. ಹಿಮಾಚಲ ಪ್ರದೇಶ ಸರ್ಕಾರ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಹಾಗಾಗಿ ಕರ್ನಾಟಕದ ಆರ್ಥಿಕ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದಾಗಿದೆ. ಕಾಂಗ್ರೆಸ್ ಸಚಿವರು, ಶಾಸಕರೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 