ಸಿದ್ದೇಶ್ವರ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಗುರುವಂದನೆ ಕಾರ್ಯಕ್ರಮ
Siddeshwar Vidyalaya's alumni friendship meeting and Guru Vandana program
ಲೋಕದರ್ಶನ ವರದಿ
ಕಾಗವಾಡ 15 : ಸಮಾಜದಲ್ಲಿ ಶೈಕ್ಷಣಿಕ, ಆಧ್ಯಾತ್ಮಿಕ, ಮತ್ತು ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಮಾನಗಳಲ್ಲಿ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಆದರ್ಶದ ಕನ್ನಡಿಯಾಗಿವೆ ಎಂದು ಪರಮಾನಂದವಾಡಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಪ.ಪೂ. ಡಾ. ಅಭಿನವ ಬ್ರಹ್ಮಾನಂದ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ. ಅವರು ರವಿವಾರ ದಿನಾಂಕ 14 ರಂದು ತಾಲೂಕಿನ ಶಿರಗುಪ್ಪಿ ಗ್ರಾಮದ ಸಿದ್ದೇಶ್ವರ ವಿದ್ಯಾಲಯಲ ಮತ್ತು ವಿದ್ಯಾನಂದ ಕನ್ನಡ ಮಾಧ್ಯಮ ಶಾಲೆಯ ಸನ್ 2000-2021 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹಸಮ್ಮೇಳನ ಮತ್ತು ಗುರುವಂದನಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ಮಾತನಾಡುತ್ತಿದ್ದರು.
ಇವತ್ತು ಶಾಲೆಗಳೆಂದರೇ ಕೇವಲ ಪಾಠ ಹೇಳಿಕೊಡುವ ಸ್ಥಳಗಳಾಗಿ ರೂಪಗೊಂಡಿವೆ. ಶೈಕ್ಷಣಿಕ ಕ್ಷೇತ್ರ ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುತ್ತಿರುವ ಸಮಯದಲ್ಲಿ 25 ವರ್ಷಗಳ ಹಿಂದೆ ತಾವು ಕಲಿತ ಶಾಲೆ, ಗುರುಗಳನ್ನು ಗೌರವಿಸುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು. ಕಾರ್ಯಕ್ರಮವನ್ನು ಗಣ್ಯರು ವೇದಾಂತ ಕೇಸರಿ ಮಲ್ಲಿಕಾರ್ಜುನ ಮಹಾಸ್ವಾಮಿಗಳ, ಸಿದ್ದೇಶ್ವರ ಶ್ರೀಗಳ ಮತ್ತು ಸರಸ್ವತಿ ದೇವಿ ಭಾವಚಿತ್ರದ ಪೂಜೆಯೊಂದಿಗೆ, ಸಸಿಗೆ ನೀರೇರೆದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಮಗೆ ಕಲಿಸಿದ ಶಿಕ್ಷಕರನ್ನು ಹಳೇ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅನೇಕ ಶಿಕ್ಷಕರು, ಹಳೇ ವಿದ್ಯಾರ್ಥಿಗಳು ಮಾತನಾಡಿ, ಹಳೆ ನೆನಪುಗಳನ್ನು ಮೆಲುಕು ಹಾಕಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 