ಶಿವಶರಣಗೆ ಸಿದ್ದೇಶ್ವರ ಸ್ವಾಮಿ ಆಧ್ಯಾತ್ಮ ರತ್ನ ಪ್ರಶಸ್ತಿ ಪ್ರದಾನ
Siddeshwara Swamy presents Adhyatma Ratna award to Shivsharan
ದೇವರಹಿಪ್ಪರಗಿ 17: ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕ ಕಲಬುರ್ಗಿ ಮತ್ತು ಸಾಕ್ಷಿ ಪ್ರತಿಷ್ಠಾನ ಇವರ ಸಯುಕ್ತ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಕಲಬುರ್ಗಿ ಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಮಹದೇವಪ್ಪ ಶಿವಶರಣ ಅವರಿಗೆ ರಾಜ್ಯ ಮಟ್ಟದ ಲಿಂ.ಪ.ಪೂ ಶ್ರೀ ಸಿದ್ದೇಶ್ವರ ಸ್ವಾಮಿ ಆಧ್ಯಾತ್ಮ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕ್ಷೇತ್ರದ ರಬಿನಾಳ ಗ್ರಾಮದಲ್ಲಿ ಜನಿಸಿದ ಇವರು ಸುಮಾರು 15 ವರ್ಷಗಳ ಕಾಲ ನಾಡು, ನುಡಿ,ಜಲ, ಸಂಸ್ಕೃತಿಯ ಕುರಿತು ಅನುಭವ ಇರುವ ಇವರು ಲೇಖನ, ಕವಿತೆಗಳು, ಸಂಶೋಧನೆ, ಜಾನಪದ ಗೀತೆ, ತತ್ವಪದ, ಭಾವಗೀತೆ ಸೇರಿದಂತೆ ಸುಮಾರು 7ಪುಸ್ತಕಗಳನ್ನು ಪ್ರಕಟ ಮಾಡುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದ್ದಾರೆ. ಪ್ರಸಕ್ತ ದೇವರ ಹಿಪ್ಪರಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವುದು, ಇವರ ಸೇವೆ ಪರಿಗಣಿಸಿ ರವಿವಾರದಂದು ಕಲಬುರ್ಗಿ ಪಟ್ಟಣದ ರಂಗಾಯಣದಲ್ಲಿ ನಾಡಿನ ಸಾಹಿತಿಗಳು ರಾಜಕೀಯ ಮುಖಂಡರು ಗಣ್ಯರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ. ಮಹಾದೇವಪ್ಪ ಶಿವಶರಣರ ಅವರಿಗೆ ಪ್ರಶಸ್ತಿ ಲಭಿಸಿದ್ದಕ್ಕೆ ಗ್ರಾಮದ ಪ್ರಮುಖರು, ಗಣ್ಯರು, ಶಿಕ್ಷಕರು ಹಾಗೂ ಸಾಹಿತಿಗಳು ಅಭಿನಂದಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 