ರೈತ ಸಂಘದ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸಿದ್ಧನಗೌಡ ಆಯ್ಕೆ
Siddhanagowda elected as Vijayapura District President of the Farmers' Association
ದೇವರಹಿಪ್ಪರಗಿ 11 : ತಾಲೂಕಿನ ಹರನಾಳ ಗ್ರಾಮದ ಯುವ ರೈತ ಮುಖಂಡ ಸಿದ್ಧನಗೌಡ ಜಲಪೂರ (ಪಾಟೀಲ) ಅವರನ್ನು ವಿಜಯಪುರ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘದ ಕಿತ್ತೂರು ಕರ್ನಾಟಕ ವಿಭಾಗದ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸಿದ್ಧನಗೌಡ ಜಲಪೂರ(ಪಾಟೀಲ) ಅವರನ್ನು ಆಯ್ಕೆ ಮಾಡಲಾಯಿತು.
ಪದಾಧಿಕಾರಿಗಳಾದ ಮಹಾದೇವಪ್ಪ. ಶಿ. ತೇಲಿ ಕಾರ್ಯಧ್ಯಕ್ಷರನ್ನಾಗಿ, ಸಂಗಾರೆಡ್ಡಿ ತೆಗ್ಗಿನಮನಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ, ಗುರಣ್ಣಗೌಡ ಬಿರಾದಾರ ಜಿಲ್ಲಾ ಉಪಾಧ್ಯಕ್ಷರನ್ನಾಗಿ, ಸಾಹೇಬಗೌಡ ರೆಡ್ಡಿ, ಪುಟ್ಟು ಗಡದನ್ನವರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನಾಗಿ, ಶಾಂತಾ ಕೆರೊಟಗಿ ಜಿಲ್ಲಾ ಮಹಿಳಾ ಅಧ್ಯಕ್ಷರನ್ನಾಗಿ, ಶಂಕ್ರಮ್ಮ ಚಿನ್ನರೆಡ್ಡಿ ಮಲ್ಲಾಬಾದಿ ಜಿಲ್ಲಾ ಮಹಿಳಾ ಉಪಾಧ್ಯಕ್ಷರನ್ನಾಗಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದರು. ಮೊದಲು ಯುವ ಘಟಕದ ರಾಜ್ಯ ಸಂಚಾಲಕರಾಗಿ ಸಾಕಷ್ಟು ಕೆಲಸಗಳನ್ನು ಮಾಡಿರುವ ಸಿದ್ದನಗೌಡ ಜಲಪೂರ (ಪಾಟೀಲ) ಅವರಿಗೆ ರಾಜ್ಯಾಧ್ಯಕ್ಷರು, ರಾಜ್ಯ ಗೌರವ ಅಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರು ಧ್ವಜ ಹಸ್ತಾಂತರಿಸುವ ಮೂಲಕ ಅಧಿಕೃತವಾಗಿ ವಿಜಯಪುರ ಜಿಲ್ಲಾ ಅಧ್ಯಕ್ಷರೆಂದು ಘೋಷಣೆ ಮಾಡಲಾಯಿತು.
ಕಿತ್ತೂರು ಕರ್ನಾಟಕ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಸಭೆಯ ಅಧ್ಯಕ್ಷತೆ ವಹಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಪ್ರಧಾನ ಕಾರ್ಯದರ್ಶಿ ಎನ್. ಡಿ. ವಸಂತಕುಮಾರ, ಕೆಆರ್‌ಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷೆ ಮಂಜುಳ ಎಸ್.ಅಕ್ಕಿ, ವಿಭಾಗಿಯ ಕಾರ್ಯದರ್ಶಿ ಎಂ.ಎಲ್. ಕೆ ನಾಯ್ಡು, ವಿಜಯನಗರದ ಜಿಲ್ಲಾ ಯುವ ಘಟಕದ ಅಧ್ಯಕ್ಷ ರವಿ ತಂಬ್ರಹಳ್ಳಿ, ಕಿತ್ತೂರು ಕರ್ನಾಟಕ ವಿಭಾಗದ ಪ್ರಮುಖರಾದ ರಾಜ್ಯ ಉಪಾಧ್ಯಕ್ಷ ಮುತ್ತಪ್ಪ ಕುಮಾರ, ಚನ್ನಪ್ಪ ಗಣಾಚಾರಿ, ಬೆಳಗಾವಿ ಜಿಲ್ಲಾಧ್ಯಕ್ಷ ಬಸವರಾಜ್ ಮೊಕಾಶಿ, ಗದಗ ಜಿಲ್ಲಾಧ್ಯಕ್ಷ, ಮುತ್ತನಗೌಡ ಚೌಡರೆಡ್ಡಿ, ಕಿತ್ತೂರು ಕರ್ನಾಟಕ ವಿಭಾಗದ ಕಾರ್ಯದರ್ಶಿ ಡಿ.ಎಮ್. ನಧಾಪ್ ಸೇರಿದಂತೆ ಕಿತ್ತೂರು ಕರ್ನಾಟಕದ ಬಾಗಲಕೋಟೆ ವಿಜಯಪುರ, ಬೆಳಗಾವಿ, ಗದಗ, ಸೇರಿದಂತೆ ಮುಂತಾದ ಪದಾಧಿಕಾರಿಗಳು ಇದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 