ಸಿದ್ಧಾರೂಢರ 97ನೇ ಪುಣ್ಯಾರಾಧನೆ: ಆ.29ರಂದು ತೆಪ್ಪೋತ್ಸವ
Siddharudha's 97th Punyaradhana: Float festival on August 29
ಲೋಕದರ್ಶನ ವರದಿ
ಮಹಾಲಿಂಗಪುರ 27: ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಆಗಸ್ಟ್ 29ರಂದು ಶನಿವಾರ ಜಗದ್ಗುರು ಸಿದ್ಧಾರೂಢರ 97ನೇ ಪುಣ್ಯಾರಾಧನೆ ನಿಮಿತ್ತ 44ನೇ ವರ್ಷದ ತೆಪ್ಪೋತ್ಸವ (ಜಲರಥೋತ್ಸವ) ನಡೆಯಲಿದೆ.
ತೇಪ್ಪೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಮಮದಾಪುರ ವೀರಯ್ಯ ಸ್ವಾಮಿಗಳಿಂದ ಸಿದ್ಧಾರೂಢರ ಮೂರ್ತಿಗೆ ಅಭಿಷೇಕ ನೆರವೇರಲಿದೆ. ಬೆಳಿಗ್ಗೆ 10 ಗಂಟೆಗೆ ಪುರಸಭೆಯ ಮಾಜಿ ಸದಸ್ಯೆ ಸವಿತಾ ಚ. ಹುರುಕಡ್ಲಿ ಅವರಿಂದ 1,100 ಜನ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.
ನಂತರ ಬುದ್ಧಿಪೀಠ, ಖಾನಟ್ಟಿ, ಹಿಪ್ಪರಗಿ, ಗದ್ಯಾಳ ಸೇರಿದಂತೆ ವಿವಿಧ ಗ್ರಾಮಗಳ ಕಲಾವಿದರಿಂದ ಭಜನಾ ಕಾರ್ಯಕ್ರಮಗಳು ಜರುಗಲಿವೆ. ಆಶ್ರಮದ ಪೀಠಾಧಿಪತಿ ಸಹಜಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಧ್ಯಾಹ್ನ 3.30ಕ್ಕೆ ತೇಪ್ಪೋತ್ಸವದ ಪ್ರವಚನ ಕಾರ್ಯಕ್ರಮ ನಡೆಯಲಿದ್ದು, ಆಶ್ರಮದ ಉತ್ತರಾಧಿಕಾರಿ ಸೋಮನಾಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ರನ್ನಬೆಳಗಲಿ ಸದಾಶಿವ ಗುರೂಜಿ, ಕಂಕಣವಾಡಿ ಮಾರುತಿ ಶರಣರು, ಚಿಕ್ಕಪಡಸಲಗಿ ಅಕ್ಕಮಹಾದೇವಿತಾಯಿ ಹಾಗೂ ಸೈದಾಪುರದ ಮಾತೋಶ್ರೀ ವಿದ್ಯಾವತಿ ತಾಯಿ ಸೇರಿದಂತೆ ಗಣ್ಯರು ಭಾಗವಹಿಸಿ ಸಿದ್ಧಾರೂಢರ ಚರಿತ್ರೆ ಆಧರಿಸಿ ಪ್ರವಚನ ನೀಡಲಿದ್ದಾರೆ.
ವಿಧಾನ ಪರಿಷತ್ ಉಪಸಭಾಪತಿ ಡಾ. ಉಮಾಶ್ರೀ, ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಉದ್ಯಮಿ ಸಂಗಮೇಶ ನಿರಾಣಿ, ಶರಣಶ್ರೀ ಮಲ್ಲಪ್ಪ ಪೂಜಾರಿ, ಮುಖ್ಯಾಧಿಕಾರಿ ನಾಮದೇವ ಲಮಾಣಿ, ಕಾನಿಪ ಅಧ್ಯಕ್ಷ ಮಹೇಶ ಮನ್ನಯ್ಯನವರಮಠ ಹಾಗೂ ಕಾನಿಪ ಜಿಲ್ಲಾ ಕಾರ್ಯಕಾರಿ ಸದಸ್ಯ ಚಂದ್ರಶೇಖರ ಮೋರೆ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ವಿಶಾಲ ಕೆರೆಯಲ್ಲಿ ತೇಪ್ಪೋತ್ಸವ (ಜಲರಥೋತ್ಸವ) ನಡೆಯಲಿದ್ದು, ನಗರ ಭೂಮಾಪನ ಅಧಿಕಾರಿ ಅಶೋಕ ನಾಯಕರಿಂದ ಪೂಜೆ ನೆರವೇರಲಿದೆ ಎಂದು ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮ ಟ್ರಸ್ಟ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮೋರೆ ಹಾಗೂ ಖಜಾಂಚಿ ಅಲ್ಲಪ್ಪ ಗುಂಜಿಗಾಂವಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 