ಹೊಲಗುಂದಿಯಲ್ಲಿ ಸಿದ್ದೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ ಸಂಭ್ರಮ
Siddheshwara Swamy Palanquin Festival Celebrations in Holagundi
ಹೂವಿನಹಡಗಲಿ, ಆ.31: ತಾಲೂಕಿನ ಹೊಲಗುಂದಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಸ್ವಾಮಿಗೆ ಬೆಳಗ್ಗೆ ವಿಶೇಷ ಅಭಿಷೇಕ, ಬಿಲ್ವಾರ್ಚನೆ ಹಾಗೂ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಅಳವಂಡಿ ಹಿರೇಮಠದ ಮರುಳಾರಾಧ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಲ್ಲಕ್ಕಿ ಉತ್ಸವ ಜರುಗಿತು.
ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಿಂದ ವಾದ್ಯಮೇಳಗಳೊಂದಿಗೆ ಮುಖ್ಯ ಬೀದಿಯಲ್ಲಿ ಮೆರವಣಿಗೆ ಆರಂಭವಾಗಿ, ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತು. ಹೊಲಗುಂದಿ ಸೇರಿದಂತೆ ಸುತ್ತಮುತ್ತಲಿನ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಉತ್ಸವದ ಉಸ್ತುವಾರಿ ವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 