ಸಿದ್ದೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ: ಭಕ್ತರಿಂದ ವಿಜೃಂಭಣೆಯ ಆಚರಣೆ

ಸಿದ್ದೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ: ಭಕ್ತರಿಂದ ವಿಜೃಂಭಣೆಯ ಆಚರಣೆ  Siddheshwara Swamy Palanquin Procession: Grand Celebration by Devotees


ಹೊಲಗುಂದಿ, ಆ.30: ತಾಲ್ಲೂಕಿನ ಹೊಲಗುಂದಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವವು ಶನಿವಾರ ವಿಜೃಂಭಣೆಯಿಂದ ನಡೆಯಿತು.  ಸ್ವಾಮಿಗೆ ಬೆಳಗ್ಗೆ ವಿಶೇಷ ಅಭಿಷೇಕ, ಬಿಲ್ವಾರ್ಚನೆ, ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಆಳವಂಡಿ ಹಿರೇಮಠದ ಮರುಳಾರಾಧ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಲ್ಲಕ್ಕಿ ಉತ್ಸವ ಜರುಗಿತು.  

ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವವು ಪ್ರಮುಖ ಬೀದಿಗಳಲ್ಲಿ ವಾದ್ಯಮೇಳಗಳೊಂದಿಗೆ ಮೆರವಣಿಗೆಯಾಗಿ ಹೊರಟು, ಶ್ರೀ ಸಿದ್ದೇಶ್ವರ ದೇವಸ್ಥಾನವನ್ನು ತಲುಪಿತು. ಹೊಲಗುಂದಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ ನೂರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದರು.  ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉತ್ಸವದ ಉಸ್ತುವಾರಿ ವಹಿಸಿದ್ದರು.