ಸಿದ್ದು ಮಾರುತಿ ಹಣಮಸಾಗರ ವ್ಯಕ್ತಿ ಕಾಣೆ
Sidhu Maruti Hanamasagara: man missing
ಬೆಳಗಾವಿ, ಸೆ.18 : ಜಿಲ್ಲೆಯ ಹಿಂಡಲಗಾ ಗ್ರಾಮದ ಸಿಂಡಿಕೇಟ್ ಕಾಲೋನಿ, ಲಕ್ಷ್ಮೀ ನಗರದ 42 ವರ್ಷ ವಯಸ್ಸಿನ ಸಿದ್ದು ಮಾರುತಿ ಹಣಮಸಾಗರ ಎಂಬ ವ್ಯಕ್ತಿಯು ಕಾಣಿಯಾಗಿದ್ದಾನೆ ಎಂದು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾಣೆಯಾದ 42 ವರ್ಷ ವಯಸ್ಸಿನ ವ್ಯಕ್ತಿಯು 4.10 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋದಿಗೆಂಪು ಮೈಬಣ್ಣ, ಕೋಲು ಮುಖ, ಉದ್ದ ಮೂಗು, ಅಗಲ ಹಣೆ ಹಾಗೂ ಕನ್ನಡ, ಹಿಂದಿ, ಮರಾಠಿ ಭಾಷೆ ಮಾತನಾಡುತ್ತಾನೆ. ಬಿಳಿ ಬಣ್ಣದ ಉದ್ದ ತೋಳಿನ ಕಾಟನ್ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಟನ್ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕ್ಯಾಂಪ ಪೊಲೀಸ ಠಾಣೆಯ ಪೊಲೀಸ ಇನ್ಸಪೆಕ್ಟರ ಅಥವಾ ಪೊಲೀಸ ಕಂಟ್ರೋಲ್ ರೂಮ್ ಇವರ ದೂರವಾಣಿ ಸಂಖ್ಯೆ: : 0831-2405234 ಮತ್ತು 0831-2405278 ಗೆ ಸಂಪರ್ಕಿಸಬಹುದಾಗಿದೆ ಎಂದು ಕ್ಯಾಂಪ ಪೊಲೀಸ ಠಾಣೆಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 