ಯೋಗದಿಂದ ಆರೋಗ್ಯದಲ್ಲಿ ಗಣನೀಯ ಸುಧಾರಣೆ
Significant improvement in health through yoga
ಹಾವೇರಿ 22: ಪ್ರತಿದಿನ ಯೋಗ ಮಾಡುವುದರಿಂದ ನಮ್ಮ ಆರೋಗ್ಯದಲ್ಲಿ ಗಣನೀಯವಾಗಿ ಸುಧಾರಣೆಯಾಗುತ್ತದೆ ಯೋಗ ನಮಗೆ ವರದಾನವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಾ್ಪ ಎನ್. ಅವರು ಹೇಳಿದರು.
ನಗರದ ಜಿಲ್ಲಾ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ರವಿವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ ಮತ್ತು ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಯೋಗ ದಿನಾಚರಣೆ ಕಾರ್ಯಕವ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಜಗತ್ತಿನ ಬಹುತೇಕ ದೇಶಗಳು ತಮ್ಮ ಆರೋಗ್ಯವೃದ್ಧಿಗೆ ಯೋಗವನ್ನು ಅನುಸರಿಸುತ್ತಿವೆ. ಪ್ರತಿಯೊಬ್ಬರೂ ಪ್ರತಿದಿನ ಯೋಗ ಮಾಡುವುದರಿಂದ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬಹುದು. ಇಂದು ನಾವೆಲ್ಲರೂ ಒತ್ತಡದ ಜೀವನದಲ್ಲಿದ್ದೇವೆ. ಒತ್ತಡ ನಿವಾರಣೆಗೆ ಯೋಗ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ಮಹ್ಮದ ಅನ್ವರ್ ಹುಸೇನ ಮೊಗಲಾನಿ, ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಎಚ್.ವಿ., ಪ್ರಧಾನ ದಿವಾಣಿ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಆಕರ್ಷ ಎಂ., ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ರಾಹುಲ್ ಆದಿನಾಥ ನ್ಯಾಮಗೌಡ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಸರ್ಕಾರಿ ವಕೀಲ ಎಸ್.ಎಫ್.ವಾರ್ತಿ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 