ರಾಜ್ಯ ಗಂಗಾಮತ ನೌಕರರ ಸಂಘಕ್ಕೆ ಬೆಳ್ಳಿ ಹಬ್ಬದ ಸಂಭ್ರಮ
Silver Jubilee celebrations for the State Gangamat Employees' Association
ಬೀಳಗಿ 20: ಕರ್ನಾಟಕ ರಾಜ್ಯ ಗಂಗಾಮತ ನೌಕರರ ಸಂಘ ಇದೇ ವರ್ಷ 25 ವಸಂತಗಳನ್ನು ಮುಗಿಸಿ ಬೆಳ್ಳಿ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ಇದರ ಪ್ರಯುಕ್ತ ರಾಜ್ಯದಲ್ಲಿ ಗಂಗಾಮತ ಸಮಾಜ ಬಲಿಷ್ಠಗೊಳಿಸುವ ಉದ್ದೇಶದಿಂದ ರಾಜ್ಯ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಉದಯಕುಮಾರ ಅಂಬಿಗೇರ ಹೇಳಿದರು.
ಪಟ್ಟಣದ ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಸಮಾರಂಭದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಸಮಾರಂಭದ ಸಾನಿಧ್ಯ ಚೌಡದಾನಪೂರ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಪೀಠಾಧ್ಯಕ್ಷ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಜೀ, ಬಾಗಲಕೋಟೆ ರಾಮಾರೂಢ ಮಠದ ಪರಮರಾಮಾರೂಢ ಮಹಾಸ್ವಾಮಿಜೀ ವಹಿಸಿಕೊಳ್ಳಲಿದ್ದಾರೆ.
ಉದ್ಘಾಟನೆ ಜಿಲ್ಲಾ ಉಸ್ತುವಾರಿ ಸಚಿವ ಆರಿ್ಬ.ತಿಮ್ಮಾಪೂರ ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಎಸ್. ವೈದ್ಯ ನೆರವೇರಿಸುವರು. ಪ್ರತಿಭಾ ಪುರಸ್ಕಾರ ಮಾಜಿ ಸಚಿವ ಹಾಗೂ ನಿ.ಅಂ.ಚೌಡಯ್ಯನವರ ಗುರುಪೀಠದ ಕಾರ್ಯಾಧ್ಯಕ್ಷ ಪ್ರಮೋದ ಮದ್ವರಾಜ್ ನೀಡುವರು. ನೌಕರ ಭವನ ಉದ್ಘಾಟನೆ ರಾಜ್ಯ ಗಂ.ನೌ.ಕ್ಷೇ. ಸಂಘದ ರಾಜ್ಯಾಧ್ಯಕ್ಷ ಎಂ.ಶ್ರೀನಿವಾಸ ಹಾಗೂ ಜಿಲ್ಲಾ ಗಂಗಾಮತ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಕೋಳಿ ನೆರವೇರಿಸುವರು. ಗಂಗಾ ಪರಮೇಶ್ವರಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ ಹಾಗೂ ಶಾಸಕ ಉಮೇಶ ಮೇಟಿ ಮಾಡುವರು.
ಉಡುಪಿ ಶಾಸಕ ಯಶಪಾಲ್ ಸುವರ್ಣ, ನಾಡೋಜ ಡಾ.ಜಿ.ಶಂಕರ, ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮ್ಮಕ್ಕನೂರ, ಪಿ.ಎಚ್.ಪೂಜಾರ, ಸಾಬಣ್ಣ ತಳವಾರ, ಮಾಜಿ ಸಚಿವ ಹಾಗೂ ನಿ.ಅಂ.ಚೌಡಯ್ಯನವರ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಸೇರಿದಂತೆ ಮಾಜಿ ಹಾಗೂ ಹಾಲಿ ಜನಪ್ರತಿನಿಧಿಗಳು, ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 