ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ
Simplification of land conversion rules: Minister Krishna Byre Gowda
ಬೆಳಗಾವಿ ಸುವರ್ಣಸೌಧ (ಡಿ.10) ಕ.ವಾ.: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.
ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.
ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೋವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 