ಸರಳವಾಗಿ ಶಂಕರಾಚಾರ್ಯರ ಜಯಂತಿ
Simply Shankaracharya's Jayanti
ಲೋಕದರ್ಶನ ವರದಿ
ಬಾಗಲಕೋಟೆ 21: ಭಾರತ ಆದ್ಯ ದಾರ್ಶನಿಕರಲ್ಲಿ ಪ್ರಮುಖರಾದ ಆದಿ ಶಂಕರಾಚಾರ್ಯರ ಜಯಂತಿಯನ್ನು ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ಇತರೆ ಅಧಿಕಾರಿಗಳು ಪುಷ್ಾರೆ್ಪಣ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಶಂಕರಾಚಾರ್ಯರ ಜೀವನ, ತತ್ವ ಮತ್ತು ಭಾರತೀಯ ಸಂಸ್ಕೃತಿಗೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಜಿ.ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಆಯುಷ ಇಲಾಖೆಯ ಅಧಿಕಾರಿ ಹಿರೇಮಠ, ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 