ಫ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಿಂಚನಾಗೆ ಸನ್ಮಾನ
Sinchana felicitated for winning first place in the Fashion Show Icon of India competition
ಲೋಕದರ್ಶನ ವರದಿ
ಫ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಿಂಚನಾಗೆ ಸನ್ಮಾನ
ಹಾನಗಲ್ 04: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಇತ್ತೀಚಿಗೆ ಎಸ್.ಜೆ.ಫ್ಯಾಶನ್ ದಿವಾ ಸ್ಟಾರ್ ಸಂಸ್ಥೆ ಆಯೋಜಿಸಿದ್ದ ಫ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಇಲ್ಲಿನ ಪುಟಾಣಿ ಪ್ರತಿಭೆ ಸಿಂಚನಾ ರಮೇಶ ಚಾವಡೇಕರ ಅವಳನ್ನು ಶಾಸಕ ಶ್ರೀನಿವಾಸ ಮಾನೆ ಇಲ್ಲಿ ಸನ್ಮಾನಿಸಿ, ಗೌರವಿಸಿದರು.
ಪ್ರತಿಯೊಬ್ಬರಲ್ಲಿ ಸಹ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ, ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಪೋಷಕರು ಮತ್ತು ಸಮಾಜ ಕಾಳಜಿ ವಹಿಸಬೇಕಿದೆ. ಅಂದಾಗ ಮಾತ್ರ ಇಂಥ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯವಿದೆ. ಚಿಕ್ಕ ವಯಸ್ಸಿನಲ್ಲಿ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ಸಾಧನೆ ಮೆರೆದಿರುವ ಸಿಂಚನಾ ಹಾನಗಲ್ ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಶಾಸಕ ಮಾನೆ ಹರ್ಷ ವ್ಯಕ್ತಪಡಿಸಿದರು.
ಕೆಪಿಸಿಸಿ ಸದಸ್ಯ ಟಾನಗೌಡ ಪಾಟೀಲ,ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಕರ್ನಾಟಕ ಹಾಲು ಉತ್ಪಾದಕ ಸಹಕಾರಿ ಮಹಾಮಂಡಳದ ನಿರ್ದೇಶಕ ಚಂದ್ರ್ಪ ಜಾಲಗಾರ, ತಾಪಂ ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಮುಖಂಡರಾದ ಅಶೋಕ ಹಲಸೂರ, ರಾಜಕುಮಾರ ಶಿರಪಂಥಿ, ನಾಗರಾಜ ಆರೇರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 