ಹುಸಿಯಾದ ಸಿಂದಗಿ ನಗರಸಭೆ ಭರವಸೆ: ಶ್ರೀಶೈಲಗೌಡ
Sindagi Municipal Council promise a flop: Srishaila Gowda
ಹುಸಿಯಾದ ಸಿಂದಗಿ ನಗರಸಭೆ ಭರವಸೆ: ಶ್ರೀಶೈಲಗೌಡ
ಸಿಂದಗಿ 11: ಸಿಂದಗಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ನೀಡಿದ ಭರವಸೆ ಹುಸಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಪುರಸಭೆಗಳನ್ನು ನಗರಸಭೆಗಳನ್ನಾಗಿಸುವ ಸಂದರ್ಭ ಬಂದರೆ ಸಿಂದಗಿ ಪುರಸಭೆಯನ್ನು ನಗರಸಭೆಯನ್ನಾಗಿಸಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸಚಿವರು ಈ ಹಿಂದೆ ಭರವಸೆ ನೀಡಿದ್ದರು. ಆದರೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಸಿಂದಗಿ ನಗರಸಭೆಯಾಗುವ ಕನಸು ಕನಸಾಗಿಯೇ ಉಳಿಯುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಉಂಟಾಗಿದೆ ಎಂದು ಅವರು ವಿಷಾದಿಸಿದ್ದಾರೆ.
ಸಿಂದಗಿ ಪಟ್ಟಣ ಸಾಂಸ್ಕೃತಿಕವಾಗಿ ಮತ್ತು ವ್ಯಾವಹಾರಿಕವಾಗಿ ಸಾಕಷ್ಟು ಬೆಳವಣಿಗೆ ಹೊಂದಿದ್ದು, ಈವರೆಗೆ ಪಟ್ಟಣ ಎನಿಸಿಕೊಂಡಿರುವುದು ನಗರವಾಗಿ ಮಾರ್ಾಡುಗೊಳ್ಳುತ್ತದೆ ಎಂಬ ಸಂತಸ ದೂರಾಗಿ ನಿರಾಶೆ ಮೂಡಿದೆ. ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸದೇ, ನಗರಾಭಿವೃದ್ಧಿ ಸಚಿವರು ಕೊಟ್ಟ ಮಾತಿನಂತೆ ನಡೆದುಕೊಂಡು ಸಿಂದಗಿ ಪುರಸಭೆಯನ್ನು ನರಗಸಭೆಯನ್ನಾಗಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಬೇಕು ಎಂದು ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 