ಕರೆದೇವರ ಗುಡಿ ಸಂರಕ್ಷಣೆಗೆ ಸಿಂಗ್ರಿ ಆಗ್ರಹ
Singri demands conservation of Karedevara temple
ಗದಗ, ಆ. 29: ಗದಗ ನಗರದ ಐತಿಹಾಸಿಕ ಅಸ್ಮಿತೆ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿರುವ ಶರಾಫ ಬಜಾರ್‌ನ ಪುರಾತನ ‘ಕರೆದೇವರ ಗುಡಿ’ (ಶ್ರೀ ಚಕ್ರಾಧಾರಿ ಸೋಮೇಶ್ವರ ದೇವಸ್ಥಾನ) ವಾಣಿಜ್ಯೀಕರಣದಿಂದ ಕಣ್ಮರೆಯಾಗುತ್ತಿರುವುದನ್ನು ತಡೆಯಲು ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹೀರಾಲಾಲ್ ಸಿಂಗ್ರಿ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು, ಹಿಂದೆ ಹಳೆಯ ಬಸ್ ನಿಲ್ದಾಣ ಹಾಗೂ ಟಾಂಗಾಕೂಟ್‌ನಿಂದಲೇ ದೇವಸ್ಥಾನದ ಭವ್ಯ ಗೋಪುರ ಕಾಣಿಸುತ್ತಿತ್ತು. ಆದರೆ, ಕಳೆದ ಕೆಲವು ದಶಕಗಳಲ್ಲಿ ದೇವಸ್ಥಾನದ ಸುತ್ತಮುತ್ತ ಅವೈಜ್ಞಾನಿಕವಾಗಿ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಿರುವ ಪರಿಣಾಮ, ಐತಿಹಾಸಿಕ ದೇವಸ್ಥಾನ ಕಿರಿದಾದ ಗಲ್ಲಿಯೊಳಗೆ ಸಿಲುಕಿದೆ ಎಂದು ಆರೋಪಿಸಿದರು.
ಕಾಶಿ ವಿಶ್ವನಾಥ ಕಾರಿಡಾರ್ ಹಾಗೂ ಉಡುಪಿ ಶ್ರೀಕೃಷ್ಣ ಮಠದ ಮಾದರಿಯಲ್ಲಿ ಟಾಂಗಾಕೂಟ್‌ನಿಂದ ಕರೆದೇವರ ಗುಡಿಯವರೆಗೆ ನೇರ ದರ್ಶನಕ್ಕೆ ಅನುವಾಗುವಂತೆ ರಸ್ತೆ ಅಗಲೀಕರಣ ಯೋಜನೆ ರೂಪಿಸಬೇಕು. ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿಯಾಗಿರುವ ಖಾಸಗಿ ಜಾಗಗಳನ್ನು ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರಂಪರಿಕ ಸಂರಕ್ಷಣೆಯ ದೃಷ್ಟಿಯಿಂದ ಸೂಕ್ತ ಪರಿಹಾರ ನೀಡಿ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ನಗರಾಭಿವೃದ್ಧಿ, ಮುಜರಾಯಿ ಹಾಗೂ ಪುರಾತತ್ವ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಿ, ಪ್ರದೇಶವನ್ನು ಪಾರಂಪರಿಕ ವಲಯವೆಂದು ಘೋಷಿಸಬೇಕು. ಸೌಂದರ್ಯೀಕರಣ ಹಾಗೂ ಸಂರಕ್ಷಣೆಗೆ ?25ರಿಂದ ?50 ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಅವರು ಆಗ್ರಹಿಸಿದರು.
“ಕೇವಲ ಕಾಂಕ್ರೀಟ್ ಕಟ್ಟಡಗಳ ನಿರ್ಮಾಣವೇ ನಗರದ ಅಭಿವೃದ್ಧಿಯಲ್ಲ. ಪೂರ್ವಜರು ಬಿಟ್ಟುಹೋದ ಇತಿಹಾಸ ಮತ್ತು ಪರಂಪರೆಯನ್ನು ಉಳಿಸುವುದು ನಮ್ಮ ಹೊಣೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಗದಗಿನ ಇತಿಹಾಸಪ್ರೇಮಿಗಳು ಹಾಗೂ ಸಾರ್ವಜನಿಕರನ್ನು ಸಂಘಟಿಸಿ ಹೋರಾಟ ನಡೆಸುವುದು ಅನಿವಾರ್ಯ,” ಎಂದು ಹೀರಾಲಾಲ್ ಸಿಂಗ್ರಿ ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 