ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರ ಸಾವು

Sisters killed in BBMP garbage lorry and bike accident

ಬೆಂಗಳೂರು 04: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಗರದ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಹೋದರಿಯರು, ಎಡಬದಿಯಿಂದ ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸವಾರರ ಮೇಲೆ ಹರಿದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ಸಹೋದರಿಯರು. 

ಅಪಘಾತದ ಬೆನ್ನಲ್ಲೇ ಹೆಣ್ಣೂರು ಸಂಚಾರಿ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.