ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಬೆಳಗಾವಿ

Site survey for construction of Bridge Co. Barrage, Belgaum

ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಬೆಳಗಾವಿ  

ಸುಳಗಾ  1  :  ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಹಿತ ದೃಷ್ಟಿಯಿಂದ ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣದ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯರೊಂದಿಗೆ ಸ್ಥಳದ ಸಮೀಕ್ಷೆ (ಸರ್ವೇ) ನಡೆಸಿದರು.ಈ ಭಾಗದ ಶಾಸಕರು ಹಾಗೂ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಬ್ರಿಡ್ಜ್‌ ಕಂ ಬ್ಯಾರೇಜ್ ಮಂಜೂರಾಗಿದ್ದು,  ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.ಈ ವೇಳೆ ಸಹಾಯಕ ಇಂಜಿನಿಯರ್ ಮಾಳಗಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಜಯ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.