ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

ಬೆಂಗಳೂರು, ಮೇ 10,ಕೋವಿಡ್-19/ ಕೊರೋನಾ  ವೈರಾಣು ಸೋಂಕು ತಡೆಯಲು ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ‌ "ಶಿವಶರಣೆ  ಹೇಮರೆಡ್ಡಿ ಮಲ್ಲಮ್ಮ ಜಯಂತಿ"ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ  ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ  ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು. "ಹೇಮರೆಡ್ಡಿ  ಮಲ್ಲಮ್ಮ" ಅವರ ಭಾವಚಿತ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ  ಜಿಲ್ಲಾ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಹಾಗೂ ಜಿಲ್ಲಾಧಿಕಾರಿ ಕಚೇರಿ‌  ವ್ಯವಸ್ಥಾಪಕವಿಜಯಕಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಸೇರಿದಂತೆ  ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.