ಹುಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರು ದಿನಗಳ ತರಬೇತಿ ಕಾರ್ಯಕ್ರಮ
Six-day training program at Hulakoti Government First Grade College
ಲೋಕದರ್ಶನ ವರದಿ
ಹುಲಕೋಟಿ 03 : ಇಲ್ಲಿನ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಆರು ದಿನಗಳ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ’ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಸಮಾರೋಪಗೊಂಡಿತು.
ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಹಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜತೆಗೆ ಅಗತ್ಯ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮೊದಲ ದಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕಿ ಸಾವಿತ್ರಿ ಟಿ. ಅವರು ‘ಸಂವಹನ ಕೌಶಲ್ಯಗಳು’ ಕುರಿತು ತರಬೇತಿ ನೀಡಿ, ಪರಿಣಾಮಕಾರಿ ಮಾತುಗಾರಿಕೆ, ಆಲಿಸುವ ಕೌಶಲ್ಯ, ದೇಹಭಾಷೆ ಹಾಗೂ ಆತ್ಮವಿಶ್ವಾಸದ ಮಹತ್ವವನ್ನು ಪ್ರಾಯೋಗಿಕ ಚಟುವಟಿಕೆಗಳ ಮೂಲಕ ವಿವರಿಸಿದರು.
ಎರಡನೇ ದಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ. ನೇಮಾಣಿ ಸತೀಶ್ ಅವರು ‘ತಾರ್ಕಿಕ ಚಿಂತನೆ ಮತ್ತು ಅಭಿಕ್ಷಮತೆ’ ಕುರಿತು ಮಾರ್ಗದರ್ಶನ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತಾರ್ಕಿಕ ಚಿಂತನೆಯ ಮಹತ್ವ ಹಾಗೂ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವ ವಿಧಾನಗಳನ್ನು ತಿಳಿಸಿದರು.
ಮೂರನೇ ದಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಸುಭಾಷ್ ಹರಿಹರ ಅವರು ‘ಜೀವನ ಕೌಶಲ್ಯಗಳು’ ಕುರಿತು ತರಬೇತಿ ನೀಡಿ, ಗುರಿ ನಿರ್ಧಾರ, ಸಮಯ ನಿರ್ವಹಣೆ, ಸೂಕ್ತ ನಿರ್ಧಾರ ಕೈಗೊಳ್ಳುವಿಕೆ, ಒತ್ತಡ ನಿರ್ವಹಣೆ ಹಾಗೂ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುವ ಕುರಿತು ವಿವರಿಸಿದರು.
ನಾಲ್ಕನೇ ದಿನ ಗಣಕವಿಜ್ಞಾನ ಸಹಾಯಕ ಪ್ರಾಧ್ಯಾಪಕ ಡಾ. ಅರುಣಕುಮಾರ ಅವರು ‘ಡಿಜಿಟಲ್ ಸಿದ್ಧತೆ’ ಕುರಿತು ಉಪನ್ಯಾಸ ನೀಡಿ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನದ ಬಳಕೆ, ಆನ್ಲೈನ್ ಸುರಕ್ಷತೆ ಹಾಗೂ ಕೃತಕ ಬುದ್ಧಿಮತ್ತೆಯ ಸಮರ್ಕ ಬಳಕೆಯ ಕುರಿತು ಜಾಗೃತಿ ಮೂಡಿಸಿದರು.
ಐದನೇ ದಿನ ರಸಾಯನಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮನೋಜಕುಮಾರ ಅವರು ‘ವೃತ್ತಿ ಯೋಜನೆ’ ಕುರಿತು ತರಬೇತಿ ನೀಡಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉನ್ನತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ವಿವಿಧ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.
ಆರನೇ ದಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಸಂಯೋಜಕ ಹುಸೇನಭಾಷಾ ಅವರು ‘ತಮ್ಮನ್ನು ಮತ್ತು ಇತರರನ್ನು ಅರ್ಥಮಾಡಿಕೊಳ್ಳುವುದು’ ವಿಷಯದ ಕುರಿತು ತರಬೇತಿ ನೀಡಿದರು. ಸ್ವ-ಅರಿವು, ವ್ಯಕ್ತಿತ್ವ, ಸಾಮರ್ಥ್ಯ, ಮಿತಿಗಳು, ಭಾವನೆಗಳ ನಿರ್ವಹಣೆ ಹಾಗೂ ಉತ್ತಮ ಮಾನವ ಸಂಬಂಧಗಳ ಕುರಿತು ಪ್ರಾಯೋಗಿಕ ಉದಾಹರಣೆಗಳೊಂದಿಗೆ ವಿವರಿಸಿದರು.
ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ಕಾರ್ಯಕ್ರಮದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಐಕ್ಯೂಎಸಿ ಸಂಯೋಜಕ ಡಾ. ಜಿತೇಂದ್ರ ಜಹಗೀರದಾರ್ ಮಾತನಾಡಿ, ಇಂತಹ ತರಬೇತಿಗಳು ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದರು.
ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲ ಡಾ. ಅಪ್ಪಣ್ಣ ಹಂಜೆ ಅವರು ಆರು ದಿನಗಳ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದ ಎಲ್ಲರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ಮತ್ತು ಬಿಎಫ್ಎ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾರ್ಯಕ್ರಮದ ಸಂಯೋಜಕ ಹುಸೇನಭಾಷಾ ಅವರು ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 