ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಆರು ಮಂದಿ ಸಾವು

Six killed in Firecracker factory blast

ಚೆನ್ನೈ 02: ಪಟಾಕಿ ತಯಾರಿಸುತ್ತಿದ್ದ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ತಮಿಳುನಾಡಿನಲ್ಲಿ ನಡೆದಿದೆ.

ಘಟನೆಯಲ್ಲಿ ಹಲವಾರು ಕಾರ್ಮಿಕರು ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಂತ್ರಸ್ತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಟಾಕಿ ತಯಾರಿಸುವ ವೇಳೆ ಕೆಮಿಕಲ್ಸ್‌ ಮಿಶ್ರಣದ ಸಂದರ್ಭದಲ್ಲಿ ಸ್ಫೋಟ ಸಂಭವಿಸರಬಹುದು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಿದ್ದಾರೆ.

ವಿರುದ್ವುನಗರದಲ್ಲಿ 1,150 ಪಟಾಕಿ ತಯಾರಿಕೆ ಕಾರ್ಖಾನೆಗಳಿದ್ದು, ಅಂದಾಜು 4 ಲಕ್ಷ ಕಾರ್ಮಿಕರಿದ್ದಾರೆ. ಶಿವಕಾಶಿವೊಂದರಲ್ಲೇ ದೇಶದ ಶೇ.70ರಷ್ಟು ಪಟಾಕಿ ಉತ್ಪಾದನೆಯಾಗುತ್ತದೆ ಎಂದು ವರದಿ ತಿಳಿಸಿದೆ.

ದುರಂತದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ.ಸ್ಟಾಲಿನ್‌ ಸಂತಾಪ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.