ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಶತಮಾನ ಹಳೆಯ ಮನೆ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು
Six of Family Killed as Century-Old House Collapses in UP's Pratapgarh
ಪ್ರತಾಪಗಢ, ಆ. 6: ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಶತಮಾನ ಹಳೆಯ ಮನೆ ಗುರುವಾರ ಮುಂಜಾನೆ ಕುಸಿದು ಬಿದ್ದ ಪರಿಣಾಮ ಎರಡು ಶಿಶುಗಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹುಲಿ ಪ್ರದೇಶದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ.
ಪೊಲೀಸರ ಪ್ರಕಾರ, ಬಿಸಿ ಹಾಗೂ ಉಕ್ಕಿನ ವಾತಾವರಣ ಇದ್ದ ಕಾರಣ ಕುಟುಂಬದ ಏಳು ಮಂದಿ ಹವಾನಿಯಂತ್ರಿತ (ಎಸಿ) ಕೊಠಡಿಯಲ್ಲಿ ಮಲಗಿದ್ದರು. ಇದೇ ವೇಳೆ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಎಲ್ಲರೂ ಅವಶೇಷಗಳಡಿ ಸಿಲುಕಿದರು.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಸುಮಾರು ಎರಡು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಶೇಷಗಳಡಿ ಸಿಲುಕಿದ್ದ ಏಳು ಮಂದಿಯನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಆರು ಮಂದಿಯನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಮೃತರನ್ನು ಮನೆಯ ಮಾಲೀಕ ಪ್ರಮೋದ್ ಶ್ರೀವಾಸ್ತವ (60), ಅವರ ಪತ್ನಿ ರೀತಾ ಶ್ರೀವಾಸ್ತವ (55), ಪುತ್ರ ನಿತಿನ್ ಶ್ರೀವಾಸ್ತವ (25), ಸೊಸೆ ಮಾಧುರಿ ಶ್ರೀವಾಸ್ತವ (23), ಹಾಗೂ ಮೊಮ್ಮಕ್ಕಳಾದ ಎರಡು ವರ್ಷದ ಮಾಧವ್ ಮತ್ತು ನಾಲ್ಕು ತಿಂಗಳ ಆದ್ವಿಕ್ ಎಂದು ಗುರುತಿಸಲಾಗಿದೆ.
ಪ್ರಮೋದ್ ಅವರ ಮತ್ತೊಬ್ಬ ಪುತ್ರ ಅಮನ್ ಶ್ರೀವಾಸ್ತವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರೀ ಮಳೆಯಿಂದ ಈಗಾಗಲೇ ದುರ್ಬಲಗೊಂಡಿದ್ದ ಸುಮಾರು 100 ವರ್ಷ ಹಳೆಯ ಮನೆ ಕುಸಿದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 