ಕೊರೊನಾದಿಂದ ಗುಣಮುಖರಾದ ಆರು ಜನ ಆಸ್ಪತ್ರೆಯಿಂದ ಡಿಸ್ಚಾಜ್೯
ವಿಜಯಪುರ ಮೇ.09: ಕೋವಿಡ್-19 ದಿಂದ ಗುಣಮುಖರಾದ ಆರು ಜನರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಹೊಂದಿದ್ದು, ಈವರೆಗೆ ಒಟ್ಟು 31 ಕೋವಿಡ್-19 ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.
ಇಂದು 50 ವರ್ಷದ ಮಹಿಳೆ ರೋಗಿ ಸಂಖ್ಯೆ 397, 28 ವರ್ಷದ ಪುರುಷ ರೋಗಿ ಸಂಖ್ಯೆ 402, 14 ವರ್ಷದ ಗಂಡು ಮಗು ರೋಗಿ ಸಂಖ್ಯೆ 407, 18 ವರ್ಷದ ಯುವತಿ ರೋಗಿ ಸಂಖ್ಯೆ 410, 27 ವರ್ಷದ ಯುವಕ ರೋಗಿ ಸಂಖ್ಯೆ -467 ಹಾಗೂ 27 ವರ್ಷದ ಯುವಕ ರೋಗಿ ಸಂಖ್ಯೆ 511 ಇವರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರೋಗಿ ಸಂಖ್ಯೆ 510 ಸಂಪರ್ಕದಿಂದ 11 ವರ್ಷದ ಹೆಣ್ಣು ಮಗುವಿಗೆ ಕೋವಿಡ್-19 ಸೋಂಕು ತಗುಲಿರುವ ಬಗ್ಗೆ ಇಂದು ದೃಢಪಟ್ಟಿದ್ದು, ರೋಗಿ ಸಂಖ್ಯೆ 769 ಇವರು ಕಂಟೇನ್ಮೆಂಟ್ ವಲಯದಿಂದ ಬಂದವರಾಗಿದ್ದಾರೆ. ಈವರೆಗೆ ಒಟ್ಟು 49 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 31 ಕೋವಿಡ್-19 ದಿಂದ ಗುಣಮುಖರಾದ ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮೂರು ಜನರು ಕೋವಿಡ್-19 ದಿಂದ ಸಾವನ್ನಪ್ಪಿದ್ದು, ಸದ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ 15 ಜನ ಕೋವಿಡ್-19 ಪಾಸಿಟಿವ್ ರೋಗಿಗಳು ಸಕ್ರಿಯ ರೋಗಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 2085 ಜನರು ವಿದೇಶ ಮತ್ತು ಇತರೆ ಕಡೆಗಳಿಂದ ಬಂದ ಬಗ್ಗೆ ವರದಿಯಾಗಿದ್ದು, ತೀವ್ರ ನಿಗಾ ಇಡಲಾಗಿದೆ. 1590 ಜನರು 1 ರಿಂದ 28 ದಿನಗಳವರೆಗಿನ ರಿಪೋಟರ್ಿಂಗ್ ಅವಧಿಯಲ್ಲಿದ್ದಾರೆ.
ಈವರೆಗೆ 2432 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿ, 2328 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 55 ಜನರ ವರದಿ ಇನ್ನೂ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಶರಣಪ್ಪ ಕಟ್ಟಿ, ಡಾ. ಲಕ್ಕಣ್ಣವರ, ಡಾ. ರಾಜಕುಮಾರ ಹಿರೇಮಠ, ಡಾ.ಧರ್ಮರಾಜ ಇಂಗಳೆ, ಡಾ.ಎ.ಜಿ ಬಿರಾದಾರ, ಡಾ. ಅಜೀತ ಕೊಟ್ನಿಸ್, ಚರಂತಿಮಠ, ಸುಜಾತಾ ಭಜಂತ್ರಿ, ಶಾಂತಾ.ಆರ್, ಶ್ರೀಮತಿ ಎಸ್.ಎ ಹಗೇದಾಲ, ವಿಠ್ಠಲ ಸಂಪಗಾಂವ, ಸಂತೋಷ ಬಿರಾದಾರ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 