ರಾಮನಗರ, ಅ 9: ಚಲ್ಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣಾರ್ಧದಲ್ಲಿಯೇ ಕಾರು ಸುಟ್ಟು ಕರಕಲಾಗಿರುವ ಘಟನೆ ರಾಮನಗರದ ಶಾಂತಿನಿಕೇತನ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಮಲೆಮಹಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.